ಬೆಂಗಳೂರು: ಹೊಸವರ್ಷದ ಸಂಭ್ರಮಾಚರಣೆಗೆ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳು ಸೇರಿದಂತೆ ಇಡೀ ಬೆಂಗಳೂರು ಸಿದ್ದಗೊಂಡಿದೆ.
2016 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಪೊಲೀಸರು ಸಾಕಷ್ಟು ಕ್ರಮಗಳನ್ನ ಕೈಗೊಂಡಿದ್ದು, ಭಾರೀ ಬಂದೋಬಸ್ತ್ ಮಾಡುತ್ತಿದ್ದಾರೆ.