ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿಗೆ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಶಾಂತಿನಗರ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಕೇರಳ ಮೂಲದ 25 ವರ್ಷದ ಅಜಿತ್ ಥಾಮಸ್ ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಥಾಮಸ್ ಬೈಕ್ ಗೆ ಬಿಎಂಟಿಸಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಲ್ಸನ್ ಗಾರ್ಡನ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.