ಬೆಂಗಳೂರು: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರಗೈದು ವಿಡಿಯೋ ಮಾಡಿರುವ ಘಟನೆ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅತ್ಯಾಚಾರ ಎಸಗಿರುವ ಗ್ರಾಮ ಪಂಚಾಯಿತಿ ಸದಸ್ಯೆಯೋರ್ವರ ಪತಿ ಸಂತೋಷ್ ರೆಡ್ಡಿ ಹಾಗೂ ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮೊನ್ನೆ ರಾತ್ರಿ ಮಹಿಳೆಯ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಹೆಚ್ಎಸ್ಆರ್ ಲೇಔಟ್ ಪೊಲೀಸರು ಸಂತೋಷ್, ಸುರೇಶ್ ಹಾಗೂ ಮಂಜುನಾಥ್ ಎಂಬುವವರನ್ನು ಬಂಧಿಸಿದ್ದಾರೆ.