News Kannada
Monday, September 26 2022

ಬೆಂಗಳೂರು ನಗರ

ಮಹಾದಾಯಿ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ - 1 min read

Photo Credit :

ಮಹಾದಾಯಿ ತೀರ್ಪು ವಿರೋಧಿಸಿ ಕರ್ನಾಟಕ ಬಂದ್

ಬೆಂಗಳೂರು: ಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧಿಕರಣ ವಜಾಗೊಳಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂದು  ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀರ್ಪು ವಿರೋಧಿಸಿ ಬಂದ್ ಮಾಡಲಾಯಿತು.

ನಿನ್ನೆ ತೀರ್ಪು ಹೊರ ಬೀಳುತ್ತಿದ್ದಂತೆಯೇ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಾಗಿತ್ತು. ಬಳಿಕ ತೀರ್ಪು  ವಿರೋಧಿಸಿ ರೈತಪರ ಸಂಘಟನೆಗಳು ಮತ್ತು ಕಳಸಾ ಬಂಡೂರಿ ಹೋರಾಟ ಸಮಿತಿ ಉತ್ತರ ಕರ್ನಾಟಕ ಬಂದ್ ಗೆ  ಕರೆ ನೀಡಿತ್ತು. ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕುಂದಾನಗರಿ ಬೆಳಗಾವಿಯಲ್ಲಿ ಬಂದ್‌ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್‌ ಆಗಿವೆ. ಸಾರಿಗೆ ಸಂಚಾರ ಅಲ್ಲಲ್ಲಿ ಕಂಡುಬರುತ್ತಿದೆ. ಗದಗ ಜಿಲ್ಲೆಯಲ್ಲೂ ಪ್ರತಿಭಟನೆ ಕಾವು ಜೋರಾಗಿದೆ. ರೈತ ಸಂಘಟನೆಗಳ ಕಾರ್ಯಕರ್ತರು ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ್‌ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸಾರಿಗೆ ವಾಹನಗಳಿಲ್ಲದೇ ಸಂಚಾರ ಅಸ್ತವ್ಯಸ್ಥವಾಗಿದ್ದು, ನ್ಯಾಯಾಧಿಕರಣದ ತೀರ್ಪು ಕರ್ನಾಟಕದ ವಿರುದ್ಧ ಬಂದಿರುವುದನ್ನು ವಿರೋಧಿಸಿ ಬೆಳಗಾವಿ, ಹುಬ್ಬಳ್ಳಿ, ನರಗುಂದ, ಬೆಟಗೇರಿಯಲ್ಲಿ  ರೈತರು ಬೀದಿಗಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

See also  ಸರ್ವಜನಿಕರ ಅನುಕೂಲಕ್ಕಾಗಿ ಅಧಿಕೃತ ಇಮೇಲ್ ಘೋಷಿಸಿದ ಘೋಷಿಸಿದ ಸಚಿವಾಲಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು