ಬೆಳಗಾವಿ: ಮಹಾದಾಯಿ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಹಾದಾಯಿ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಮಧ್ಯಸ್ಥಿಕೆ ಒಂದೇ ದಾರಿ ಎಂದು ಹೇಳಿದರು.
ಕರ್ನಾಟಕ-ಗೋವಾ- ಮಹಾರಾಷ್ಟ್ರ ಸಿಎಂಗಳ ಜೊತೆ ಪ್ರಧಾನಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕೆಂದು ಮಹದಾಯಿ ನದಿ ನೀರು ಹಂಚಿಕೆ ಮಂಡಳಿ ಸಲಹೆ ನೀಡಿದೆ. ನಾವು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿದ್ದೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸುವುದೇ ಸೂಕ್ತ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
ದಶಕಗಳಿಂದ ಕಾಡುತ್ತಿರುವ ಮಹಾದಾಯಿ ನದಿ ನೀರು ಹಂತಿಕೆ ಸಮಸ್ಯೆ ಬಗೆಹರಿಸಲು ಸರ್ಕಾರ ಯಾವ್ಯಾವ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದರ ಬಗ್ಗೆ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಸದನದಲ್ಲಿ ವಿವರಣೆ ನೀಡಿದರು.