ಬೆಂಗಳೂರು: ನಟಿ ಮೈತ್ರಿಯಾ ಗೌಡ ಅವರು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದು, ಈ ಸಂಬಂಧ ಹೈಕೋರ್ಟ್ ಇದೀಗ ವಂಚನೆ ಪ್ರಕರಣವನ್ನು ರದ್ದು ಮಾಡಿದೆ.
ಆರ್.ಟಿ. ನಗರ ಠಾಣೆಯಲ್ಲಿ ಕಾರ್ತಿಕ್ ಗೌಡ ವಿರುದ್ಧ ತಮ್ಮನ್ನು ವಿವಾಹವಾಗಿ ವಂಚಿಸಿದ್ದಾರೆ ಎಂದು ನಟಿ ಮೈತ್ರಿಯಾ ಗೌಡ ಅವರು ದೂರು ನೀಡಿದ್ದು, ದೂರಿನನ್ವಯ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಕಾರ್ತಿಕ್ ಗೌಡ ಈ ವಂಚನೆ ಪ್ರಕರಣವನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ವಿಚಾರಣೆ ನಡೆಸಿ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿದೆ.