ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು 68ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಿದರು.
ಕರ್ನಾಟಕದ ಜನರು ರಾಜ್ಯದ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ನಿರ್ಮಿಸಿದ್ದಾರೆ. ರಾಜ್ಯ ಸರ್ಕಾರದ ಹಲವು ಯೋಜನೆಗಳು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿವೆ. ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಇತರ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ಹೇಳಿದರು.
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ, ಕೆಎಸ್ಆರ್ಪಿ, ಅಗ್ನಿಶಾಮಕ ದಳ, ಹೋಮ್ ಗಾರ್ಡ್ಸ್ ಸೇರಿದಂತೆ ಹಲವು ಶಾಲಾ ಮಕ್ಕಳು ಪಥಸಂಚಲನದಲ್ಲಿ ಭಾಗಿಯಾಗಿದ್ದರು.