ಬೆಂಗಳೂರು: ಯಾವುದೇ ಪರಿಸ್ಥಿತಿಯಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ನೀಡಿದ ರಾಜೀನಾಮೆ ಹಿಂದಕ್ಕೆ ಪಡೆಯುವುದಿಲ್ಲ ಎಂದು ಎಸ್.ಎಂ.ಕೃಷ್ಣ ಖಚಿತ ಪಡಿಸಿದ್ದಾರೆ.
‘ಸ್ವತಃ ಮುಖ್ಯಮಂತ್ರಿಗಳೇ ನಿಮ್ಮ ಜೊತೆ ಚರ್ಚೆಗೆ ಸಿದ್ಧರಿದ್ದಾರೆ. ದಯವಿಟ್ಟು ನಿಲುವು ಬದಲಿಸಿ, ಏನೇ ಸಮಸ್ಯೆಗಳಿದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ’ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಸಚಿವರಾದ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ ಮತ್ತು ಎಂ.ಬಿ. ಪಾಟೀಲ ಹಿರಿಯ ಕಾಂಗ್ರೆಸ್ ನಾಯಕರಾದ ಎಂ.ವಿ.ರಾಜಶೇಖರನ್ ಮತ್ತು ಮಾಲಕರಡ್ಡಿ ಅವರು ಸುಮಾರು 2 ಗಂಟೆ ಕಾಲ ಮಾತನಾಡಿದರೂ, ಕೃಷ್ಣ ಅವರನ್ನು ಮನವೊಲಿಸುವ ಪ್ರಯತ್ನ ವಿಫಲವಾಯಿತು.
ದೇಶ ಹಾಗೂ ರಾಜ್ಯದ ಹಿತದೃಷ್ಟಿಯಿಂದ ನಿಮ್ಮ ರಾಜೀನಾಮೆ ಹಿಂದಕ್ಕೆ ಪಡೆಯಬೇಕು ಎಂದು ಅವರು ಒಕ್ಕೊರಲ ಮನವಿ ಮಾಡಿದರು. ಆದರೆ, ಅವರ ಮನವಿಯನ್ನು ಕೃಷ್ಣ ನಯವಾಗಿ ತಿರಸ್ಕರಿಸಿ, ನನ್ನ ಸ್ವಾಭಿಮಾನಕ್ಕೆ ಚ್ಯುತಿ ಉಂಟಾಗಿದ್ದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಎಸ್.ಎಂ.ಕೃಷ್ಣ ಹೇಳಿದ್ದಾರೆ.