ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ರಾಜೀನಾಮೆ ಹಿಂಪಡೆಯುವ ಮರು ಚಿಂತನೆ ಮಾಡುವಂತೆ ಮನವೊಲಿಕೆಗೆ ಪ್ರಯತ್ನಿಸುತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ನಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹಿರಿಯ ನಾಯಕರಿಂದ ಕೂಡಿದ ಪಕ್ಷ, ಕಾಂಗ್ರೆಸ್ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲಿ ಎಸ್.ಎಂ.ಕೃಷ್ಣ, ಜಾಫರ್ ಷರೀಫ್ ಎಲ್ಲರೂ ಪಾಲ್ಗೊಂಡಿದ್ದರು. ಸಭೆಯಲ್ಲಿ ಹಿರಿಯರ ಸಲಹೆ, ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು. ಆದಷ್ಟು ಬೇಗ ಎಸ್.ಎಂ. ಕೃಷ್ಣ ಅವರನ್ನು ಭೇಟಿ ಮಾಡಿ ಮನವೊಲಿಸಲು ಯತ್ನಿಸುತ್ತೇನೆ ಎಂದರು.