ಬೆಂಗಳೂರು: ಅಪ್ರಾಪ್ತೆ ಮೇಲೆ ಫ್ಯಾಷನ್ ಇವೆಂಟ್ ಮ್ಯಾನೇಜರ್ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಪ್ರಗದೀಶ್ ಎಂಬಾತ ಬಂಧಿತ ಆರೋಪಿ. ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬೆಂಗಳೂರಿನ ಪ್ರಥಮ ಪಿಯುಸಿ ಓದುತ್ತಿದ್ದ ಮುಂಬೈ ಮೂಲದ 17 ರ ವಯಸ್ಸಿನ ವಿದ್ಯಾರ್ಥಿನಿಯನ್ನು ಫೆ.5ರಂದು ತನ್ನ ಮನೆಗೆ ಕರೆಸಿದ್ದ ಪ್ರಗದೀಶ್. ಮನೆಗೆ ಬಂದ ಯುವತಿಗೆ ಹಾಲಿನಲ್ಲಿ ಮತ್ತು ಬರಿಸುವ ಮಾತ್ರೆ ನೀಡಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಅತ್ಯಾಚಾರದ ವಿಡಿಯೋ ಮಾಡಿ ಪ್ರಗದೀಶ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಡುವ ಬೆದರಿಕೆ ಹಾಕಿ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಬ್ಲಾಕ್ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರೋ ರಾಮಮೂರ್ತಿ ನಗರ ಪೊಲೀಸರು ಆರೋಪಿ ಪ್ರಗದೀಶ್ನನ್ನು ಬಂಧಿಸಿದ್ದಾರೆ.