ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡುಗೇನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್ ಸಿಗದ ಕಾರಣಕ್ಕೆ ಬಡ ಕೂಲಿ ಕಾರ್ಮಿಕನೊಬ್ಬ ತನ್ನ ಮಗಳ ಮೃತದೇಹವನ್ನು ಟಿವಿಎಸ್ ನಲ್ಲಿ ಸಾಗಿಸಿದ ಘಟನೆ ನಡೆದಿದೆ.
ತಾಲೂಕಿನ ನಿವಾಸಿ ತಿಮ್ಮಪ್ಪ ಎಂಬುವರ ಮಗಳು ರತ್ನಮ್ಮ(20) ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಳು. ಆಕೆಯನ್ನು ಚಿಕಿತ್ಸೆಗಾಗಿ ಮಧುಗಿರಿ ತಾಲೂಕಿನ ಕೊಡುಗೇನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಅಲ್ಲಿ ವೈದ್ಯರೂ ಇಲ್ಲದ ಕಾರಣ ಆಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಬಳಿಕ ಆಕೆಯ ಮೃತದೇಹವನ್ನು ವೀರಾಪುರಕ್ಕೆ ಸಾಗಿಸಲು ಆ್ಯಂಬುಲೆನ್ಸ್ ಸಿಕ್ಕಿಲ್ಲ. ಹೀಗಾಗಿ ಪರಿಚಯಸ್ಥರೊಬ್ಬರ ಸಹಾಯ ಪಡೆದು ಟಿವಿಎಸ್ ಬೈಕ್ನಲ್ಲಿಯೇ ಮೃತದೇಹವನ್ನು ಸಾಗಿಸಲಾಗಿದೆ.