ಬೆಂಗಳೂರು: ಗಗನಸಖಿಯೊಬ್ಬರಿಗೆ ಬೈಕ್ ಸವಾರ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬಾಣಸವಾಡಿಯ ಎಚ್ಆರ್ಬಿಆರ್ ಲೇಔಟ್ನಲ್ಲಿ ನಡೆದಿದ್ದು, ಶುಕ್ರವಾರ ಈ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು 24 ವರ್ಷದ ಪ್ರೇಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಹೋಟೆಲ್ನಲ್ಲಿ ಊಟ ಮುಗಿಸಿ ತನ್ನ ಫ್ರೆಂಡ್ ಜೊತೆ ಕಳೆದ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಪ್ರೇಮ್ ಕುಮಾರ್ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಗನ ಸಖಿ ಎಚ್ ಆರ್ ಬಿಆರ್ ಲೇಔಟ್ ನಿವಾಸಿಯಾಗಿದ್ದಾರೆ.