ಬೆಂಗಳೂರು: ಸಹಪಾಠಿಗಳಿಂದಲೇ 10ನೇ ತರಗತಿಯ ಓರ್ವ ವಿದ್ಯಾರ್ಥಿ ಶಾಲಾ ವಾರ್ಷಿಕೋತ್ಸವ ವೇಳೆ ನಡೆದ ಗುಂಪು ಘರ್ಷಣೆಯಲ್ಲಿ ಹತ್ಯೆಯಾಗಿರುವ ಘಟನೆ ಸೋಮವಾರ ಯಲಹಂಕದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಹತ್ಯೆಯಾದ ವಿದ್ಯಾರ್ಥಿ ಹರ್ಷ(15) ಎಂದು ಗುರುತಿಸಲಾಗಿದ್ದು, ವಿದ್ಯಾರ್ಥಿ ಇರಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದು, ಇಂದು ಮಧ್ಯಾಹ್ನ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗುಂಪು ಘರ್ಷಣೆ ಸಂಭವಿಸಿದೆ.
ಹರ್ಷನಿಗೆ ಆಕಾಶ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದಿದ್ದು, ಕಾರ್ಯಕ್ರಮದಲ್ಲಿ ಕುಳಿತುಕೊಳ್ಳುವ ಜಾಗದ ವಿಷಯವಾಗಿ ಗಲಾಟೆ ನಡೆದಿತ್ತು.
ಸ್ಥಳಕ್ಕೆ ಭೇಟಿ ನೀಡಿದ ಯಲಹಂಕ ಪೋಲೀಸರು ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.