ಬೆಂಗಳೂರು: ಸೋಮವಾರ ಮಧ್ಯರಾತ್ರಿ ಮೂವರು ಕಾರ್ಮಿಕರು ಮ್ಯಾನ್ ಹೋಲ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮ್ಯಾನ್ ಹೋಲ್ ಒಳಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಗುತ್ತಿಗೆದಾರ ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಳ್ಳದೇ ಕಾರ್ಮಿಕರನ್ನು ಮ್ಯಾನ್ ಹೋಲ್ ಒಳಗೆ ಇಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ಸಿ.ವಿ.ರಾಮನ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಗುತ್ತಿಗೆದಾರನ ನಿಲರ್ಕ್ಷ್ಯದಿಂದ ಪ್ರಾಣಹಾನಿ ಸಂಭವಿಸಿದೆ ಎಂದು ಮೃತ ಕಾರ್ಮಿಕರ ಕುಟುಂಬದವರು ಆರೋಪ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ: ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದೆಂದು ಹೇಳಿದ್ದಾರೆ.