News Kannada
Wednesday, October 05 2022

ಬೆಂಗಳೂರು ನಗರ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ - 1 min read

Photo Credit :

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಗುರುವಾರ ಗುಂಡ್ಲುಪೇಟೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಿದ್ದ ಆರೋಪದ ಹಿನ್ನಲೆಯಲ್ಲಿ ಆಕೆಯ ವಿರುದ್ದ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಶಾಸಕ ಬಿ.ಎನ್. ವಿಜಯಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮಧ್ಯಾಹ್ನ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನಿಲ್ ಕುಮಾರ್ ಝಾ ಅವರನ್ನು ಭೇಟಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ಸಲ್ಲಿಸಿತು. ಚುನಾವಣಾ ಅಕ್ರಮಕ್ಕೆ ಕಡಿವಾಣ ಹಾಕುವಂತೆ ಇದೇ ವೇಳೆ ಮನವಿ ಮಾಡಲಾಯಿತು.

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಬಹಿರಂಗವಾಗಿ ಹಣ ಹಂಚಿದ್ದಾರೆ. ಕಾಂಗ್ರೆಸ್ ನಾಯಕರು ಹಣ ಹಂಚಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಹತ್ತಾರು ಕೇಸ್ ದಾಖಲು ಮಾಡಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು  ಶಾಸಕ ಬಿ.ಎನ್. ವಿಜಯಕುಮಾರ್ ಈ ಸಂದರ್ಭ ಹೇಳಿದರು.

See also  ಭೀಕರ ಅಪಘಾತ: ಒಂದೇ ಕುಟುಂಬದ ಏಳು ಮಂದಿ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು