ಬೆಂಗಳೂರು: ಬಿಸಿಲಿನಿಂದ ತತ್ತರವಾಗಿದ್ದ ಬೆಂಗಳೂರು ನಗರ ಭಾನುವಾರ ಸುರಿದ ಮಳೆಗೆ ತಂಪಾದ ವಾತಾವರಣ ಸೃಷ್ಟಿಯಾಯಿತು.
ಕೇವಲ 20 ನಿಮಿಷ ಸುರಿದ ಮಳೆಯಿಂದಾಗಿ ಮೆಜೆಸ್ಟಿಕ್. ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಇದರಿಂದಾಗಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ದ್ವಿಚಕ್ರವಾಹನ ಸವಾರರು ಪರದಾಡುವಂತಾಯಿತು. ವಿಧಾನಸೌಧ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೆಚ್ಎಎಲ್ ವಿಮಾನ ನಿಲ್ದಾಣ ಸೇರಿದಂತ ವಿವಿಧ ಭಾಗಗಳಲ್ಲಿ ನಿನ್ನೆ ಮಳೆಯಾಗಿದ್ದು, 9ಮಿ.ಮೀ ನಿಂದ 0.5 ಮಿಮೀನಷ್ಟು ಮಳೆಯಾಗಿದೆ.