News Kannada
Saturday, March 25 2023

ಬೆಂಗಳೂರು ನಗರ

ಮೇ 2 ಮತ್ತು 3 ರಂದು ಸಿಇಟಿ ಪರೀಕ್ಷೆ

Photo Credit :

ಮೇ 2 ಮತ್ತು 3 ರಂದು ಸಿಇಟಿ ಪರೀಕ್ಷೆ

ಬೆಂಗಳೂರು: ಮೇ 2 ಮತ್ತು 3 ರಂದು 2017ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಅವರು ತಿಳಿಸಿದ್ದಾರೆ.

ಮೊದಲ ಬಾರಿ ಪ್ರಶ್ನೆ ಪತ್ರಿಕೆಯನ್ನು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಮುದ್ರಿಸಲಾಗುತ್ತಿದೆ. ಮೇ 2 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಜೀವಶಾಸ್ತ್ರ,  ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ ಹಾಗೂ ಮೇ 3 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಭೌತಶಾಸ್ತ್ರ,  ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.  (60 ಅಂಕಗಳು) ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ  ಮೇ.4 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು.  ಸುಮಾರು 1,800 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಭ್ಯರ್ಥಿಗಳು ಮೇ 3 ರಂದು ಎರಡನೇ ದಿನದ ಕೊನೆಯ ಅವಧಿಯ ಪರೀಕ್ಷೆ ಮುಗಿದ ನಂತರ ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳಿಂದ ಬ್ರೋಚರ್ ಅನ್ನು ಪಡೆದುಕೊಳ್ಳಬೇಕು.

ಉತ್ತರಗಳನ್ನು ಒಎಂಆರ್ ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕಾಗಿರುವುದರಿಂದ, ಅಭ್ಯರ್ಥಿಗಳು ತಮ್ಮ ಜೊತೆಯಲ್ಲಿ ಬ್ಲೂ ಅಥವಾ ಬ್ಲಾಕ್ ಇಂಕ್ ಬಾಲ್ ಪಾಯಿಂಟ್ ಅನ್ನು ತೆಗೆದುಕೊಂಡು ಹೋಗಬೇಕು. ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ ಹಾಗೆಯೇ ಪರೀಕ್ಷೆಯ ಮೊದಲನೆ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು, ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಇರುವ ಯಾವುದಾದರೂ ಒಂದು ಕಾಲೇಜಿನ ಗುರುತಿನ ಚೀಟಿ, 2ನೇ ಪಿಯುಸಿ, 12ನೇ ತರಗತಿಯ ಪ್ರವೇಶ ಪತ್ರ, ಬಸ್ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋಟರ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು,ತೆಗೆದುಕೊಂಡು ಹೋಗುವಂತಿಲ್ಲ.  ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಟ್ಯಾಬ್ಲೆಟ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಗಳನ್ನು ತರುವಂತಿಲ್ಲ. ರಾಜ್ಯಾದ್ಯಂತ ಪರೀಕ್ಷೆಯನ್ನು ಒಟ್ಟು 404 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು,  ಈ ಪೈಕಿ 82 ಪರೀಕ್ಷಾ ಕೇಂದ್ರಗಳು ಬೆಂಗಳೂರಿನಲ್ಲಿ ಇರಲಿವೆ. ಒಟ್ಟು 1,85,411 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಸಿದ್ದಾರೆ.  ಅವರಲ್ಲಿ 94,415 ಅಭ್ಯರ್ಥಿಗಳು, ಪುರುಷ ಅಭ್ಯರ್ಥಿಗಳು ಹಾಗೂ 90,996 ಮಹಿಳಾ ಅಭ್ಯರ್ಥಿಗಳು.  ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಕ ಮಾಡಿರುತ್ತಾರೆ.

ಒಟ್ಟು 404 ವೀಕ್ಷಕರು, 808 ವಿಶೇಷ ಜಾಗೃತ ದಳದ ಸದಸ್ಯರು, 404 ಪ್ರಶ್ನೆ ಪತ್ರಿಕೆ ಪಾಲಕರು,  ಸುಮಾರು 11,625 ಕೊಠಡಿ ಮೇಲ್ವಿಚಾರಕರು ಹಾಗೂ 32,000 ಅಧಿಕಾರಿ, ಸಿಬ್ಬಂದಿ ವರ್ಗದವರನ್ನು ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

     

See also  ಅಕ್ಕನನ್ನು ಕೊಂದ ದ್ವೇಷಕ್ಕೆ ಬಾವನನ್ನು ಕೊಂದ ಬಾಮೈದ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು