News Kannada
Wednesday, October 05 2022

ಬೆಂಗಳೂರು ನಗರ

ಬೆಳೆನಷ್ಟವಾದ ರೈತರ ಖಾತೆಗೆ ಪರಿಹಾರ ಹಣ ಜಮಾ: ಕಾಗೋಡು ತಿಮ್ಮಪ್ಪ - 1 min read

Photo Credit :

ಬೆಳೆನಷ್ಟವಾದ ರೈತರ ಖಾತೆಗೆ ಪರಿಹಾರ ಹಣ ಜಮಾ: ಕಾಗೋಡು ತಿಮ್ಮಪ್ಪ

ಬೆಂಗಳೂರು: ಮುಂಗಾರು ಬೆಳೆ ನಷ್ಟ ಪರಿಹಾರದ ಮೊತ್ತ ಪ್ರತಿ ಹೆಕ್ಟೇರ್ಗೆ 6800 ರೂ.ಗಳಂತೆ ಸುಮಾರು 17 ಲಕ್ಷ ರೈತರಿಗೆ 1100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದ್ದು ರೈತರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವರು ಉಳಿದ 10 ಲಕ್ಷ ರೈತರಿಗೆ ಪರಿಹಾರ ಹಣವನ್ನು ತಿಂಗಳಾಂತ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು. ರೈತರಿಗೆ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ರೈತರು ಈ ಹಿಂದೆ ಪಡೆದಿರುವ ಸಾಲಕ್ಕೆ ಮುಟ್ಟುಗೋಲು ಹಾಕಿಕೊಳ್ಳದಂತೆ ಬ್ಯಾಂಕುಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಮುಂಗಾರು ಹಂಗಾಮಿನಲ್ಲಿ ಸುಮಾರು 160 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. 3458 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಹತ್ತಿರ 8 ರಿಂದ 10 ಕೋಟಿ ಹಣ ಇರಿಸಲಾಗಿದ್ದು ಶಾಸಕರಿಗೂ 2 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಅಲ್ಲದೆ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಬರ ನಿರ್ವಹಣೆಗೆ 1.30 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ಅವರು ಮಾತನಾಡಿದರು.

ಕುಡಿಯುವ ನೀರಿನ ತೊಂದರೆ ಇರುವ ಕಡೆ ಟ್ಯಾಂಕರುಗಳ ಮೂಲಕ ನೀರು ಸರಬರಾಜಿಗೆ ಕ್ರಮ ಕೈಗೊಂಡಿದ್ದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೂ ತಮ್ಮ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ತಹಸೀಲ್ದಾರ್ ಅವರಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು. ಪ್ರತಿ ವಾರ ಜಿಲ್ಲಾಡಳಿತವು ಬರ ಹಾಗೂ ನೀರಿನ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆಯೂ ಆದೇಶ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ವರ್ಗಾವಣೆ ಇಲ್ಲ:
ಬೇಸಿಗೆ ಮುಗಿದು ಮಳೆಗಾಲ ಪ್ರಾರಂಭವಾಗುವವರೆಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ವರ್ಗಾವಣೆ ಮಾಡುವುದಿಲ್ಲ. ತಹಸೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ವರ್ಗಾವಣೆ ಕೋರಿ ಅರ್ಜಿ ನೀಡಿದಲ್ಲಿ ಅಂತಹವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ ಸಚಿವರು ಕಂದಾಯ ಇಲಾಖೆ ಸಿಬ್ಬಂದಿ ಮುಂದಿನ ಮೂರು ತಿಂಗಳಲ್ಲಿ ಸಮರೋಪಾದಿಯಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕರ್ತವ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

ಪಾರಂಪರಿಕ ಅರಣ್ಯ ಕಾಯ್ದೆಯ ಅನುಷ್ಠಾನ ನಿರೀಕ್ಷಿಸಿದ ಮಟ್ಟದಲ್ಲಿ ನಡೆದಿಲ್ಲ ಎಂದ ಸಚಿವರು ಕೊಡಗು ಜಿಲ್ಲೆಯ ದಿಡ್ಡಳ್ಳಿ ಸಂತ್ರಸ್ಥರಿಗೆ ನೆಲೆ ಕಲ್ಪಿಸಲು ಪರ್ಯಾಯ ಸ್ಥಳ ಗುರುತಿಸಲಾಗಿದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದರು.

See also  ನಾಳೆ ಕರ್ನಾಟಕ ಬಂದ್: ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು