News Kannada
Tuesday, October 04 2022

ಬೆಂಗಳೂರು ನಗರ

ಮುಗಿಯದ ಸಚಿವ ಸಂಪುಟ ವಿಸ್ತರಣೆ ಸರ್ಕಸ್! - 1 min read

Photo Credit :

ಮುಗಿಯದ ಸಚಿವ ಸಂಪುಟ ವಿಸ್ತರಣೆ ಸರ್ಕಸ್!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟವನ್ನು ವಿಸ್ತರಣೆ ಮಾಡುತ್ತಾರೆ ಎಂಬ ಮಾತುಗಳು ಹಲವು ಸಮಯಗಳಿಂದ ಕೇಳಿ ಬರುತ್ತಿದೆಯಾದರೂ ಸದ್ಯಕ್ಕೆ ಆ ಬಗ್ಗೆ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಆದರೂ ಪಕ್ಷದ ಮೂಲಗಳಿಂದ ಬರುತ್ತಿರುವ ಸುದ್ದಿಯ ಪ್ರಕಾರ ಮೇ.10ರ ನಂತರ ವಿಸ್ತರಣೆಯ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈಗಾಗಲೇ ಸಂಪುಟ ವಿಸ್ತರಣೆಯಾದರೆ ತಮಗೂ ಸಚಿವ ಸ್ಥಾನ ನೀಡಿ ಎಂದು ಕಾದು ಕುಳಿತಿರುವ ಆಕಾಂಕ್ಷಿಗಳ ದೊಡ್ಡಪಟ್ಟಿಯೇ ಇದೆ. ಹೀಗಿರುವಾಗ ಇರುವ ಎರಡು ಸ್ಥಾನಗಳನ್ನು ಯಾರಿಗೆ ನೀಡುವುದು ಎಂಬ ಜಿಜ್ಞಾಸೆ ಸಿಎಂನ್ನು ಕಾಡುವುದಂತು ಸತ್ಯ.

ಉಪಚುನಾವಣೆ ಸಂದರ್ಭ ಗುಂಡ್ಲುಪೇಟೆಯಲ್ಲಿ ಪ್ರಚಾರ ಸಭೆಯಲ್ಲಿ ಗೀತಾಮಹದೇವಪ್ರಸಾದ್ ಅವರನ್ನು ಗೆಲ್ಲಿಸಿದರೆ ಸಚಿವರನ್ನಾಗಿ ಮಾಡುತ್ತೇನೆ ಎಂದು ನುಡಿದಿದ್ದ ಸಿದ್ದರಾಮಯ್ಯ ಈಗ ಅದನ್ನು ಪಾಲಿಸುತ್ತಾರಾ? ಒಂದು ವೇಳೆ ತಮ್ಮ ಮಾತಿನಂತೆಯೇ ಗೀತಾ ಮಹದೇವಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕಾಗಿ ದುಡಿದ ಹಿರಿಯ ಶಾಸಕರು ಸುಮ್ಮನಿರುತ್ತಾರಾ? ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ. ಹಿಂದೆ ಸಚಿವ ಸಂಪುಟ ವಿಸ್ತರಣೆ ಮಾಡಿ ಅನುಭವಿಸಿದ ಸಂಕಷ್ಟಗಳು ಹಸಿರಾಗಿರುವಾಗಲೇ ಮತ್ತೊಮ್ಮೆ ಆ ಕಾರ್ಯಕ್ಕೆ ಮುಂದಾಗಿ ಅಸಮಾಧಾನಕ್ಕೆ ಕಾರಣರಾಗುತ್ತಾರಾ ಎಂಬ ಪ್ರಶ್ನೆಗಳು ಕಾಡತೊಡಗಿದೆ. ಆದರೆ ಪಕ್ಷದ ಮೂಲಗಳ ಪ್ರಕಾರ ಮಾಜಿ ಸಚಿವರಾದ ಎಸ್.ಆರ್.ಪಾಟೀಲ್ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಎಚ್.ವೈ.ಮೇಟಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅದೇ ಸಮುದಾಯದವರೊಬ್ಬರನ್ನು ನೇಮಕ ಮಾಡಲು ನಿರ್ಧರಿಸಿದ್ದು, ಹೊಸದುರ್ಗದ ಶಾಸಕ ಗೋವಿಂದಪ್ಪ ಅವರ ಹೆಸರು ಕೇಳಿ ಬಂದಿದೆಯಾದರೂ ಮೇಟಿ ಅವರನ್ನೇ ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬ ಒತ್ತಡವೂ ಕೇಳಿಬಂದಿದೆ.
ಮೇಟಿಯವರನ್ನು ತೆಗೆದುಕೊಂಡರೆ ಉತ್ತರ ಕರ್ನಾಟಕ ಭಾಗದ ಇಬ್ಬರಿಗೆ ಅವಕಾಶ ನೀಡಿದಂತಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಿ ಎಸ್.ಆರ್.ಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡಲಾಗಿತ್ತು. ಈಗ  ಆ ಸ್ಥಾನ ಅವರಿಗೆ ಸಿಗುವ ಸಾಧ್ಯತೆ ಕಡಿಮೆಯಾಗಿರುವುದರಿಂದ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದು ನಿಜವಾದರೆ ಗೀತಾಮಹದೇವಪ್ರಸಾದ್ಗೆ ಸ್ಥಾನ ಸಿಗುವುದು ಕಷ್ಟ ಸಾಧ್ಯವಾಗಿದೆ.

ಸದ್ಯದ ಮಟ್ಟಿಗೆ ಎರಡು ಸ್ಥಾನಗಳು ಖಾಲಿಯಿದ್ದು, ಅವುಗಳನ್ನು ಭರ್ತಿ ಮಾಡುವುದು ಹೇಗೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿರುವುದಂತು ಸತ್ಯ. ಕಾರಣ ಮುಂದಿನ ದಿನಗಳು ಚುನಾವಣಾ ಕಾಲವಾಗಿರುವುದರಿಂದ ತುಂಬಾ ಎಚ್ಚರಿಕೆಯ ಹೆಜ್ಜೆಯಿಡಬೇಕಾಗುತ್ತದೆ. ಮತ್ತೆ ಪಕ್ಷದಲ್ಲಿ ಅಸಮಾಧಾನಗಳು ಭುಗಿಲೆದ್ದರೆ ಅದು ಚುನಾವಣೆಯ ಮೇಲೆ ಪರಿಣಾಮ ಬೀರುವುದಂತು ಖಚಿತವಾಗಿದೆ.

ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಕೂಡ ನಾನೇ ಎಂದು ಈ ಹಿಂದೆ ಬಹಿರಂಗ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅವರು ಬಹಳ ಎಚ್ಚರಿಕೆಯಿಂದ ಹೆಜ್ಜೆಯಿಡುತ್ತಿದ್ದು, ಎಲ್ಲವನ್ನು ತೂಗಿ, ಅಳೆಯುತ್ತಿದ್ದಾರೆ. ಹೀಗಾಗಿ ಯಾರಿಗೆ ಸಚಿವ ಸ್ಥಾನಗಳನ್ನು ನೀಡುತ್ತಾರೆ ಎಂಬುದು ಮಾತ್ರ ಮುಂದಿನ ದಿನಗಳಲ್ಲಿ ಗೊತ್ತಾಗಬೇಕಿದೆ. ಅಲ್ಲಿವರೆಗೆ ವದಂತಿಗಳು ಹರಡುತ್ತಲೇ ಇರುತ್ತದೆ. ಆಕಾಂಕ್ಷಿಗಳು ಕೂಡ ಹೆಚ್ಚಾಗುತ್ತಲೇ ಇರುತ್ತಾರೆ.

See also  ನೆರೆ ಸಂತ್ರಸ್ತರಿಗೆ ಬೆಳೆಹಾನಿ ಪರಿಹಾರ SDRF ದರಕ್ಕಿಂತ ಹೆಚ್ಚಿನ ದರ ನಿಗದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು