ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ವಜಾ ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ ಕುರಿತಂತೆ ಲಂಚ ಪಡೆದ ಆರೋಪಕ್ಕೆ ಒಳಗಾಗಿ ಬಂಧನ ಭೀತಿಯನ್ನು ಎದುರಿಸುತ್ತಿದ್ದ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ ವಿಶೇಷ ಕೋರ್ಟ್ ಮೊರೆ ಹೋಗಿದ್ದರು.ಆದರೆ ಲೋಕಾಯುಕ್ತ ಕೋರ್ಟ್ ನಿರೀಕ್ಷಣಾ ಅರ್ಜಿಯನ್ನು ವಜಾ ಮಾಡಿತ್ತು.
ಪ್ರಕರಣ ಕುರಿತಾಗಿ ಇಂದು ವಿಚಾರಣೆಗೊಳಗಾದ ಕುಮಾರಸ್ವಾಮಿ, ಬಳಿಕ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ಲೋಕಾಯುಕ್ತ ಕೋರ್ಟ್ ವಜಾ ಮಾಡಿದೆ. ಪ್ರಕರಣದ ವಿಚಾರಣೆ ಕೋರ್ಟ್ ನಲ್ಲಿ ಪ್ರಗತಿಯಲ್ಲಿದ್ದು ಜಾಮೀನು ನೀಡಿದರೆ ತನಿಖೆಗೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.
ಈ ವೇಳೆ ವಕೀಲರು ಕುಮಾರಸ್ವಾಮಿ ಪರ ವಾದ ಮಂಡಿಸಿದ್ದರು. ಪ್ರಕರಣ ಹಳೆಯದಾಗಿದ್ದು, ದುರುದ್ದೇಶ ಪೂರಕ ಪ್ರಕರಣವಾಗಿದ್ದರಿಂದ ಜಾಮೀನನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.