ಬೆಂಗಳೂರು: ಜಿ ಎಸ್ ಟಿ ಜಾರಿಯಾದ ಹಿನ್ನೆಲೆಯಲ್ಲಿ ಜುಲೈ 1 ರಿಂದ ರಾಜ್ಯದ ಎಲ್ಲಾ ವಾಣಿಜ್ಯ ತೆರಿಗೆ ಇಲಾಖೆ ಚೆಕ್ ಪೋಸ್ಟ್ ಗಳನ್ನು ರದ್ದು ಮಾಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 20 ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿದ್ದು, ಚೆಕ್ ಪೋಸ್ಟ್ ನಲ್ಲಿರುವ 300 ಸಿಬ್ಬಂದಿಗಳಿಗೆ ಲೆಕ್ಕ ಪರಿಶೋಧನಾ ಕೆಲಸಕ್ಕೆ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. ಜಿ ಎಸ್ ಟಿ ಕಾಯ್ದೆ ಅಡಿಯಲ್ಲಿ ಉತ್ಪನ್ನಗಳ ಮೇಲಿನ ತೆರಿಗೆಯನ್ನು ನೇರವಾಗಿ ಕೇಂದ್ರ ಸರ್ಕಾರಕ್ಕೆ ವಿಧಿಸಲಾಗುತ್ತದೆ. ನಂತರ ರಿಟರ್ನ್ ಫೈಲ್ ಮಾಡಬೇಕಾಗುತ್ತದೆ. ಆದ್ದರಿಂದ ರಾಜ್ಯದಲ್ಲಿ ತೆರಿಗೆ ಪಾವತಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.