News Kannada
Sunday, September 25 2022

ಬೆಂಗಳೂರು ನಗರ

ಬಿಜೆಪಿಯತ್ತ ಮಾಗಡಿ ಶಾಸಕ ಬಾಲಕೃಷ್ಣರ ಚಿತ್ತ? - 1 min read

Photo Credit :

ಬಿಜೆಪಿಯತ್ತ ಮಾಗಡಿ ಶಾಸಕ ಬಾಲಕೃಷ್ಣರ ಚಿತ್ತ?

ಮಾಗಡಿ: ಜೆಡಿಎಸ್ನಿಂದ ಸಿಡಿದು ಹೊರಬಂದಿರುವ ಶಾಸಕರಲ್ಲೊಬ್ಬರಾದ ಮಾಗಡಿ ವಿಧಾನಸಭಾಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಎಷ್ಟರ ಮಟ್ಟಿಗೆ ನಿಜ ಎಂಬುದು ಮಾತ್ರ ಇನ್ನೂ ಖಚಿತವಾಗಿಲ್ಲವಾದರೂ ಸದ್ಯದ ಮಟ್ಟಿಗೆ ರಾಜಕೀಯ ಮೂಲಗಳಿಂದ ತಿಳಿದು ಬಂದ ಮಾಹಿತಿ ಪ್ರಕಾರ  ಬಿಜೆಪಿಯತ್ತ ಒಲವು ತೋರಿರುವುದು ನಿಜ ಎನ್ನಲಾಗುತ್ತಿದೆ.

ಜೆಡಿಎಸ್ ನಿಂದ ಹೊರಬಂದ ಬಳಿಕ ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುತ್ತಾರೆ ಎಂಬ ಸುದ್ದಿಗಳಿದ್ದರೂ ಅಲ್ಲಿ ಯಾವುದೇ ರೀತಿಯಲ್ಲಿ ರಾಜಕೀಯವಾಗಿ ಬೆಳೆಯುವುದು ಕಷ್ಟವೇ ಎಂಬುದು ಅರಿವಿದ್ದರಿಂದಲೇ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವ ತೀರ್ಮಾನ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನು ರಾಜಕೀಯ ತನ್ನ ಎದುರಾಳಿಯಾಗಿರುವ ಎ.ಮಂಜು ಹೆಚ್ಚಿನ ಜನಸಂಪರ್ಕವನ್ನು ಹೊಂದಿರುವುದರಿಂದ ಮತ್ತು ಪಕ್ಷದ ಬೆಂಬಲ ಇರುವುದರಿಂದ ಕೇವಲ ತನ್ನ ವೈಯಕ್ತಿಕ ವರ್ಚಸ್ಸಿನಿಂದ ಗೆಲುವು ಸಾಧಿಸುವುದು ಕಷ್ಟ ಎಂಬುದು ಗೊತ್ತಾಗಿರುವುದರಿಂದಲೇ ಅವರು ಬಿಜೆಪಿಯತ್ತ ಮುಖ ಮಾಡಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.  
ಮಾಗಡಿ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಲಗ್ಗೆಯಿಟ್ಟಿದ್ದು ಅಲ್ಲಿ ಕಾಂಗ್ರೆಸ್ನ್ನು ತರಲೇ ಬೇಕೆಂಬ ಹಠಕ್ಕೆ ಡಿ.ಕೆ.ಶಿವಕುಮಾರ್ ಬಿದ್ದಿದ್ದಾರೆ. ಜತೆಗೆ ಕಾಂಗ್ರೆಸ್ಗೆ ಸೇರ್ಪಡೆಯಾದರೂ ಅಲ್ಲಿ ಟಿಕೆಟ್ ಸಿಗುತ್ತೆ ಎಂಬ ಧೈರ್ಯವೂ ಇಲ್ಲದಾಗಿದೆ. ಈಗಾಗಲೇ ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದು ಕಷ್ಟವಾಗಿರುವಾಗ  ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ಸಿಗುವುದು ಅಷ್ಟರಲ್ಲೇ ಇದೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಬಲವಾಗಿದೆ. ಬಿಜೆಪಿ ಪ್ರಾಬಲ್ಯ ಕಡಿಮೆಯಿದೆ. ಇದರಿಂದ ಪಕ್ಷದ ಬೆಂಬಲದೊಂದಿಗೆ ತನ್ನ ವೈಯಕ್ತಿಕ ವರ್ಚಸ್ಸನ್ನು ಸದುಪಯೋಗಿಸಿಕೊಂಡು ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಶಾಸಕರಾಗುವ ಕನಸು ಬಾಲಕೃಷ್ಣ ಅವರದ್ದಾಗಿದೆ.

ಆದರೆ ಮಾಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎ.ಮಂಜು ಮುಂಚೋಣಿಯಲ್ಲಿದ್ದು, ಬಾಲಕೃಷ್ಣ ಅವರಿಗೆ ರಾಜಕೀಯ ಹಾದಿ ಸುಗಮವಾಗಿರುತ್ತೆ ಎನ್ನಲಾಗದು.  ಹೀಗಾಗಿಯೇ ಬಾಲಕೃಷ್ಣ ಅವರು ಕಮಲ ಪಕ್ಷದತ್ತ ಹೆಜ್ಜೆಯಿಡುತ್ತಿದ್ದಾರೆ ಎಂಬುದು ಸದ್ಯದ ಸುದ್ದಿಯಾಗಿದೆ. ಮುಂದೇನಾಗುತ್ತೆ ಎಂಬುದನ್ನು ಕಾದು ನೋಡಬೇಕಾಗಿದೆ.

See also  ಕ್ರಿಸ್‌ಮಸ್, ಹೊಸ ವರ್ಷ ಆಚರಣೆಗೆ ಕೋವಿಡ್ ಪಾಲನೆ ಕಡ್ಡಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು