ಧಾರವಾಡ: ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಉಲ್ಬಣದಿಂದ ಎಸ್‌ಡಿಎಂ ಆಸ್ಪತ್ರೆಗೆ ಜೂ.24 ರಂದು ದಾಖಲಾಗಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಇಂದು ಬೆಳಗಿನ ಜಾವ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಹಕ್ಕುಚ್ಯುತಿ ಮಂಡನೆಯಾದ ಬಳಿಕ ರವಿ ಬೆಳಗೆರೆ ಬಂಧನ ಭೀತಿ ಎದುರಿಸುತ್ತಿದ್ದರು. ಡಿಸ್ಚಾರ್ಜ್ ಆದ ಬಳಿಕ ಅಜ್ಞಾತ ಸ್ಥಳಕ್ಕೆ ಹೋಗಿರುವ ಸಾಧ್ಯತೆ ಇದ್ದು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎನ್ನಲಾಗಿದೆ.
ಸ್ಪೀಕರ್ ಆದೇಶದ ಮೇರೆಗೆ ಬೆಂಗಳೂರು ಪೊಲೀಸರು ಬಂಧಿಸಲು ಬಂದಿದ್ದರು. ವಿವಿಧ ಜನಪ್ರತಿನಿಧಿಗಳು ಹಕ್ಕುಚ್ಯುತಿ ಮಂಡನೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ವಾಪಸ್ ತೆರಳಿದರು ಎನ್ನಲಾಗಿದೆ.