News Kannada
Tuesday, September 27 2022

ಬೆಂಗಳೂರು ನಗರ

‘ಸ್ಮಾರ್ಟ್ ಸಿಟಿ’ ಅನುಷ್ಠಾನಕ್ಕೆ ಸಾಲ ಪಡೆಯಲಿದೆ ಬಿಬಿಎಂಪಿ - 1 min read

Photo Credit :

‘ಸ್ಮಾರ್ಟ್ ಸಿಟಿ’ ಅನುಷ್ಠಾನಕ್ಕೆ ಸಾಲ ಪಡೆಯಲಿದೆ ಬಿಬಿಎಂಪಿ

ಬೆಂಗಳೂರು: ‘ಸ್ಮಾರ್ಟ್ ಸಿಟಿ’ಯೋಜನೆಯ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕಾಗಿ ಸಾಲ ಪಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಸ್ಮಾರ್ಟ್ ಸಿಟಿ ಯೋಜನೆ ಅಡಿ 1,742 ಕೋಟಿ ರೂ. ಮೊತ್ತದ ಕಾಮಗಾರಿ ಗಳನ್ನು ಅನುಷ್ಠಾನಗೊಳಿಸಲು ಬಿಬಿಎಂಪಿ ಪ್ರಸ್ತಾವ ಸಿದ್ಧಪಡಿಸಿದ್ದು,  ಇದಕ್ಕೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿದೆ. ಈ ಯೋಜನೆಗೆ  500 ರೂ. ಕೋಟಿ ಅನುದಾನವನ್ನು ಕೇಂದ್ರ ನೀಡಲಿದೆ. ಉಳಿದ 1,242 ಕೋಟಿ ರೂ. ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಕೇಂದ್ರದಿಂದ ವರ್ಷಕ್ಕೆ ತಲಾ 100 ಕೋಟಿ  ರೂ. ಮಾತ್ರ ಬಿಡುಗಡೆ ಆಗಲಿದೆ. ಕೇಂದ್ರದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಪಡೆಯಲು   ಐದು ವರ್ಷಗಳವರೆಗೆ ಕಾಯಬೇಕು. ಅದರ ಬದಲು ಖಾಸಗಿಯವರಿಂದ ಸಾಲ ಪಡೆದು ಕಾಮಗಾರಿಗಳನ್ನು ಆದಷ್ಟು ಬೇಗ ಜಾರಿಗೊಳಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ  ಕೈಗೆತ್ತಿಕೊಳ್ಳಲು ನಿರ್ಧರಿಸಿರುವ ಕೆ.ಆರ್.ಮಾರುಕಟ್ಟೆ ಮತ್ತು ಶಿವಾಜಿನಗರ  ಬಸ್ ನಿಲ್ದಾಣಗಳ ಆಸುಪಾಸಿನ ಪ್ರದೇಶಗಳ ಅಭಿವೃದ್ಧಿ,  ರಸ್ತೆ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ಈ ಕಾಮಗಾರಿಗಳನ್ನು ತಕ್ಷಣವೇ  ಆರಂಭಿಸಬೇಕು. ಟೆಂಡರ್ಶ್ಯೂರ್  ಮಾದರಿಯಲ್ಲಿ 25 ರಸ್ತೆಗಳ ಅಭಿವೃದ್ಧಿಗೂ ಡಿಪಿಆರ್ ಸಿದ್ಧವಿದೆ. ಈ ಕಾಮಗಾರಿಗಳನ್ನೂ ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ ಎಂದರು. ಎಸ್ಪಿವಿ ರಚನೆಗೆ ನಗರಾಭಿವೃದ್ಧಿ ಇಲಾಖೆ ಶೀಘ್ರವೇ ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾವ ದರ್ಜೆಯ ಅಧಿಕಾರಿಗಳು ಇರುತ್ತಾರೆ ಎಂಬ ಬಗ್ಗೆ ನಗರಾಭಿವೃದ್ಧಿ ಇಲಾಖೆಯವರೇ ನಿರ್ಧರಿಸುತ್ತಾರೆ ಎಂದರು.

See also  ಪ್ರಜಾಕೀಯದಿಂದ ಉಪೇಂದ್ರ ಔಟ್!?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು