News Kannada
Sunday, December 04 2022

ಬೆಂಗಳೂರು ನಗರ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

Photo Credit :

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

ಬೆಂಗಳೂರು: ತಡರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಉದ್ಯಾನ ನಗರಿ ಬೆಂಗಳೂರಿನ ರಿಚ್‌ಮಂಡ್‌ ರಸ್ತೆಯಲ್ಲಿ ನಡೆದಿದೆ.

ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿದ್ದು, ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಲಿಸುತ್ತಿದ್ದ ಕಾರಿನ ಇಂಜಿನ್ನಲ್ಲಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತ್ತು. ಈ ವೇಳೆ ಪಕ್ಕದಲ್ಲೇ ತೆರಳುತ್ತಿದ್ದ ವಾಹನ ಸವಾರರು ಕಾರು ಚಾಲಕನಿಗೆ ಮಾಹಿತಿ ನೀಡಿ ಎಚ್ಚರಿಸಿದ್ದರು. ತಕ್ಷಣ, ಎಚ್ಚೆತ್ತುಕೊಂಡ ಕಾರು ಚಾಲಕ ಕಾರನ್ನು ನಡುರಸ್ತೆಯಲ್ಲೇ ನಿಲ್ಲಿಸಿ ಕಾರಿನಿಂದ ಕೆಳಗಿಳಿದು ಬಚಾವಾಗಿದ್ದಾನೆ. ಬಳಿಕ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ರು.

ಈ ವೇಳೆ ಟ್ರಾಫಿಕ್ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡುವಂತಾಯ್ತು. ಭಾಸ್ಕರ್ ಬಾಬು ಎಂಬುವರಿಗೆ ಸೇರಿದ ಕಾರು ಇದಾಗಿದ್ದು, ಎಂಜಿ ರಸ್ತೆಯಿಂದ ಚಾಲಕ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಶೋಕನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

See also  7 ಜನ ವಿದೇಶಿ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಪತ್ತೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು