News Kannada
Friday, December 02 2022

ಬೆಂಗಳೂರು ನಗರ

ಪಿಎಂ ದಾರಿ ಹಿಡಿದ ಸಿಎಂ ಸಿದ್ದು

Photo Credit :

ಪಿಎಂ ದಾರಿ ಹಿಡಿದ ಸಿಎಂ ಸಿದ್ದು

ಬೆಂಗಳೂರು : ಹೂಡಿಕೆದಾರರ ಮನವೊಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹಾದಿಯನ್ನು ಅನುಸರಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಪ್ಟೆಂಬರ್ ನಲ್ಲಿ ಅಮೆರಿಕಾಕ್ಕೆ ಪ್ರವಾಸ ಹೋಗಲಿದ್ದಾರೆ. ಟೆಕ್ಸಾಸ್ ನ ದಲ್ಲಾಸ್ ನಲ್ಲಿ ಉತ್ತರ ಅಮೆರಿಕಾ ವಿಶ್ವ ಕನ್ನಡ ಒಕ್ಕೂಟ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 1ರಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ.

ಮುಖ್ಯಮಂತ್ರಿಯಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಅಮೆರಿಕಾಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಸಂಘಟನೆ ಖಚಿತಪಡಿಸಿದೆ. 2015ರಲ್ಲಿ ಅವರು ಈ ಉತ್ಸವದ ಉದ್ಘಾಟನೆಗೆ ಬರಬೇಕಾಗಿತ್ತು. ಆದರೆ ಪ್ರತಿಕೂಲ ಪರಿಸ್ಥಿತಿ ಕಾರಣದಿಂದಾಗಿ ಅವರಿಗೆ ಆಗ ಬರಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಅವರು ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯವರನ್ನು ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲು ನಾವಿಕ ಅಧ್ಯಕ್ಷ ಡಾ.ರೇಣುಕ ರಾಮಪ್ಪ ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಮುಖ್ಯಮಂತ್ರಿಯವರ ಜೊತೆ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಲಿದ್ದಾರೆ. ಕೊನೆ ಕ್ಷಣದಲ್ಲಿ ಯಾವುದೇ ತುರ್ತು ಸಂದರ್ಭಗಳು ಬಾರದಿದ್ದರೆ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮೆರಿಕಾಕ್ಕೆ ತೆರಳಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ಕೂಡ ತಿಳಿಸಿವೆ. ಮುಖ್ಯಮಂತ್ರಿಯವರ ವಿಮಾನ ಪ್ರಯಾಣ ಮತ್ತು ವಸತಿ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಿಲ್ಲ ಎಂದು ಕೂಡ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಐಟಿ, ಬಿಟಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ನಾನು ಕೂಡ ಈ ವರ್ಷ ನಾವಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಕಳೆದ ಸಲ ಹೋಗಿದ್ದಾಗ ಸ್ಟಾರ್ಟ್ ಅಪ್ ಬಗ್ಗೆ ನಾನು ಪ್ರಸ್ತಾಪ ಮಾಡಿದ್ದೆ. ಆಗ ಒಕ್ಕೂಟದ ಸದಸ್ಯರು ಅದರ ಮಾರ್ಗದರ್ಶಕರಾಗಲು ಒಪ್ಪಿಕೊಂಡಿದ್ದರು. ಈ ವರ್ಷ ಹೋದರೆ ಖಂಡಿತವಾಗಿಯೂ ಆ ಪ್ರಸ್ತಾಪವನ್ನು ಮತ್ತೆ ಮಾಡುತ್ತೇನೆ ಎಂದಿದ್ದಾರೆ.

 

See also  ಇಬ್ಬರು ದುಷ್ಕರ್ಮಿಗಳಿಂದ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು