News Kannada
Thursday, December 01 2022

ಬೆಂಗಳೂರು ನಗರ

ಎಲ್ಇಡಿ ಬಲ್ಬ್ ವಿತರಣೆ ಸ್ಥಗಿತ: ಡಿಕೆಶಿ

Photo Credit :

ಎಲ್ಇಡಿ ಬಲ್ಬ್ ವಿತರಣೆ ಸ್ಥಗಿತ: ಡಿಕೆಶಿ

ಬೆಂಗಳೂರು: ರಾಜ್ಯಕ್ಕೆ ಸರಬರಾಜಾಗುತ್ತಿದ್ದ ಎಲ್ಇಡಿ ಬಲ್ಬ್ ಗಳನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಕಾರಣಗಳಿಂದಾಗಿ ಎಲ್ಇಡಿ ಬಲ್ಬ್ ಪೂರೈಕೆ ನಿಲ್ಲಿಸಿರುವುದಾಗಿ ಕೇಂದ್ರ ಸರ್ಕಾರವೇ ಲಿಖಿತ ಪತ್ರವನ್ನು ರಾಜ್ಯಕ್ಕೆ ನೀಡಿದೆ. ಇದರಿಂದ ರಾಜ್ಯದಲ್ಲಿ ರಿಯಾಯ್ತಿ ದರದಲ್ಲಿ ಗ್ರಾಹಕರಿಗೆ ನೀಡಲಾಗುತ್ತಿದ್ದ ಎಲ್ಇಡಿ ಬಲ್ಬ್ ವಿತರಣೆಯನ್ನು ನಿಲ್ಲಿಸಲಾಗಿದ್ದು, ಮುಂದೆ ಕೇಂದ್ರ ಸರ್ಕಾರ ಬಲ್ಬ್ ಪೂರೈಸಿದ ನಂತರ ಬಳಿಕ ಗ್ರಾಹಕರಿಗೆ ವಿತರಿಸುವುದಾಗಿ ಹೇಳಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲವಿದ್ಯುತ್ ಉತ್ಪಾದನೆಯಲ್ಲಿ ಹಿನ್ನಡೆಯಾಗಿ ವಿದ್ಯುತ್ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದ್ದರೂ ರೈತರು, ವಿದ್ಯಾರ್ಥಿಗಳು, ಉದ್ಯಮಿಗಳು ಸೇರಿದಂತೆ ಯಾರಿಗೂ ತೊಂದರೆಯಾಗದಂತೆ ವಿದ್ಯುತ್ ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದು ಇದೇ ವೇಳೆ ಹೇಳಿದರು.

ನಿತ್ಯದ ವಿದ್ಯುತ್ ಬೇಡಿಕೆ ಪ್ರಮಾಣ 8300 ಮೆಗಾ ವ್ಯಾಟ್ ನಿಂದ 9300 ಮೆಗಾ ವ್ಯಾಟ್ ವರೆಗೂ ಇದೆ. ಮಳೆ ಕೊರತೆಯಿಂದಾಗಿ ಜಲ ವಿದ್ಯುತ್ ಉತ್ಪಾದಿಸುವ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಪ್ರಮಾಣ ಕಳೆದ ವರ್ಷಕ್ಕಿಂತ ಈ ಬಾರಿ ಕಡಿಮೆ ಇದೆ. ಆದರೂ ಯಾರಿಗೂ ತೊಂದರೆಯಾಗದಂತೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

See also  ಶಿವಕುಮಾರ ಶ್ರೀಗಳಿಗೆ ಭಾರತರತ್ನ ನೀಡಲು ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು