News Kannada
Tuesday, December 06 2022

ಬೆಂಗಳೂರು ನಗರ

ಇಸ್ರೋ ಮಾಜಿ ಅಧ್ಯಕ್ಷ ಯು.ಆರ್. ರಾವ್ ಇನ್ನಿಲ್ಲ

Photo Credit :

ಇಸ್ರೋ ಮಾಜಿ ಅಧ್ಯಕ್ಷ ಯು.ಆರ್. ರಾವ್ ಇನ್ನಿಲ್ಲ

ಬೆಂಗಳೂರು: ಖ್ಯಾತ ಅಂತರರಾಷ್ಟ್ರೀಯ ಬಾಹ್ಯಾಕಾಶ ವಿಜ್ಞಾನಿ ಯು.ಆರ್. ರಾವ್ ಅವರು ಭಾನುವಾರ ರಾತ್ರಿ ಬೆಂಗಳೂರಿನ ತಮ್ಮ ಸ್ವಗೃಹಹದಲ್ಲಿ ವಿಧಿವಶವರಾಗಿದ್ದಾರೆ. 85 ವರ್ಷದ ಯು.ಆರ್. ರಾವ್ ಅವರು ಹಲವು ದಿನಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದದ್ದರು.

ಇಸ್ರೋ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರ ಸಾಧನೆ ಅಪಾರ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರಿಗೆ ಹಲವಾರು ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಸಂದಿವೆ. ಸತೀಶ್ ಧವನ್ ಅವರ ನಂತರ ಹತ್ತು ವರ್ಷಗಳ ಕಾಲ ಇಸ್ರೋ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿದ್ದರು. 1984ರಿಂದ 1994ರ ವರೆಗೆ ಇಸ್ರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ರಾವ್ ಅವರು ತಿರುವನಂತಪುರಂನಲ್ಲಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿಯ ಕುಲಪತಿ ಆಗಿ ಸೇವೆ ಸಲ್ಲಿಸಿದ್ದಾರೆ.

ಉಡುಪಿಯವರಾದ ಯು.ಆರ್.ರಾವ್ ಅವರು, ಎಂಜಿಕೆ ಮೆನನ್, ಸತೀಶ್ ಧವನ್ ಮತ್ತು ವಿಕ್ರಮ್ ಸಾರಾಭಾಯಿ ಅವರ ಜತೆಗೆ ಕಾರ್ಯನಿರ್ವಹಿಸಿದ್ದರು. ವಿಕ್ರಂ ಸಾರಾಭಾಯ್ ಮಾರ್ಗದರ್ಶನದಲ್ಲಿ ವಿಶ್ವವಿಕರಣಗಳ ಬಗ್ಗೆ ಅಧ್ಯಯನ ಮಾಡಿದ್ದರು. ಆರ್ಯಭಟದಿಂದ ಮೊದಲುಗೊಂಡ ಮಂಗಳಯಾನದವರೆಗೆ ರಾವ್ ಅವರ ಕೊಡುಗೆ ಅನನ್ಯವಾದದ್ದು ಎಂಬುದನ್ನು ಸ್ಮರಿಸಬಹುದು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯು.ಆರ್. ಅವರಿಗೆ ಲಭಿಸಿದ ಪದ್ಮಭೂಷಣ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಒಳಗೊಂಡಂತೆ ಅನೇಕ ಪ್ರಶಸ್ತಿ-ಪುರಸ್ಕಾರಗಳು, ಗೌರವ ಡಾಕ್ಟರೇಟ್‍ಗಳು ಹಾಗೂ ಪ್ರತಿಷ್ಠಿತ ಪದಕಗಳು ಆಗಸದೆತ್ತರದ ಅವರ ಅಪಾರ ಸಾಧನೆಯನ್ನು ಬಿಂಬಿಸುತ್ತವೆ. ಪ್ರಸಕ್ತ ವರ್ಷದ ಜನವರಿ ತಿಂಗಳಿನಲ್ಲಿ ರಾವ್ ಅವರಿಗೆ ಪದ್ಮ ವಿಭೂಷಣ ಗೌರವ ನೀಡಲಾಗಿತ್ತು.

See also  ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಬಂಟ್ವಾಳ ನಿವಾಸಿ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು