News Kannada
Friday, December 02 2022

ಬೆಂಗಳೂರು ನಗರ

ಕರ್ನಾಟಕ ಸಾರಿಗೆ ಸಂಸ್ಥೆಗೆ ಮೂರು ಪ್ರಶಸ್ತಿ

Photo Credit :

ಕರ್ನಾಟಕ ಸಾರಿಗೆ ಸಂಸ್ಥೆಗೆ ಮೂರು ಪ್ರಶಸ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ತನ್ನ ಉತ್ತಮ ಸೇವೆಗಾಗಿ ಮೂರು ಪ್ರಶಸ್ತಿಗಳನ್ನು ಪಡೆದುಕೊಳ್ಳುವ ಮೂಲಕ ರಾಜ್ಯದ ಪತಾಕೆಯನ್ನು ರಾಷ್ಟ್ರಮಟ್ಟದಲ್ಲಿ ಹಾರಿಸಿದೆ. ಮುಂಬೈನಲ್ಲಿ ನಡೆದ ರಾಷ್ಟ್ರೀಯ ಪ್ರವಾಸ್ ಸಮ್ಮೇಳನದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದೇಶದ ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ನಿಗಮಗಳಿಗೆ ಮೀಸಲಿಟ್ಟ ಆರು ಪ್ರಶಸ್ತಿಗಳಲ್ಲಿ ಕೆಎಸ್ಆರ್ಟಿಸಿ ನಿಗಮ ಮೂರು ಪ್ರಶಸ್ತಿ ಪಡೆಯುವ ಮೂಲಕ ದೇಶದ ಇತರೆ ರಸ್ತೆ ಸಾರಿಗೆ ಸಂಸ್ಥೆಗಳ ನಡುವೆ ತನ್ನ ಛಾಪು ಮೂಡಿಸಿದೆ. ಅಷ್ಟೇ ಅಲ್ಲದೆ ಉತ್ತಮ ಸೇವೆ ನೀಡುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಫ್ಲೈ ಬಸ್ ಸೇವೆ, ಗ್ರಾಮಾಂತರ ಪ್ರದೇಶಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸುವ ಅತ್ಯುತ್ತಮ ಸೇವೆಗಾಗಿ, ನಗರ ಸಾರಿಗೆ ವ್ಯವಸ್ಥೆಯಲ್ಲಿ ಮಾಹಿತಿ-ತಂತ್ರಜ್ಞಾನ ಅಳವಡಿಕೆಗಾಗಿ ಮೈಸೂರು ನಗರ ಮಿತ್ರ ಜಾಣ ಸಾರಿಗೆ ವ್ಯವಸ್ಥೆಗೆ ಪ್ರಶಸ್ತಿ ದೊರೆತಿದೆ.
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಾರಿಗೆ ಸಚಿವ ದಿವಾಕರ್ ರೌಟೆ, ಜಾರ್ಖಂಡ್ ಸಾರಿಗೆ ಸಚಿವ ಸಿ.ಪಿ.ಸಿಂಗ್, ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ಆಂಥೋಣಿ ಜಾರ್ಜ್ ಮತ್ತಿತರರು ಪಾಲ್ಗೊಂಡಿದ್ದರು

See also  ಬೆಂಗಳೂರು ವಿವಿಯಲ್ಲಿ ಲಾಠಿ ಚಾರ್ಜ್: ಹಲವು ವಿದ್ಯಾರ್ಥಿಗಳಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು