News Kannada
Wednesday, December 07 2022

ಬೆಂಗಳೂರು ನಗರ

ರಾಜ್ಯದಲ್ಲಿ ನಿಲ್ಲದ ಅಕ್ರಮ ಗಣಿಗಾರಿಕೆ!

Photo Credit :

ರಾಜ್ಯದಲ್ಲಿ ನಿಲ್ಲದ ಅಕ್ರಮ ಗಣಿಗಾರಿಕೆ!

ಬೆಂಗಳೂರು: ಅಕ್ರಮ ಗಣಿಗಾರಿಕೆ ವಿರುದ್ಧವೇ ಸಮರಸಾರಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಗಣಿಗಾರಿಕೆಗೆ ಇತಿಶ್ರೀ ಹಾಡಿದಂತೆ ಕಾಣುತ್ತಿಲ್ಲ. ಈಗಾಗಲೇ ಅಲ್ಲಲ್ಲಿ ಅಕ್ರಮ ಗಣಿಗಾರಿಕೆ ತಲೆ ಎತ್ತುತ್ತಿದ್ದು, ಪ್ರತೀ ದಿನ 22 ಪ್ರಕರಣಗಳು ದಾಖಲಾಗುತ್ತಿವೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ಪ್ರಭಾವಿ ರಾಜಕಾರಣಿಗಳ ಕೈಯ್ಯಲ್ಲಿಯೇ ಅಕ್ರಮ ಗಣಿಗಾರಿಕೆಯ ಕೀಲಿಕೈ ಇರುವುದರಿಂದ ಸರ್ಕಾರ ಕೂಡ ಅದನ್ನು ಹತ್ತಿಕ್ಕುವಲ್ಲಿ ಮೌನವಾಗಿದೆ ಎಂಬ ಆರೋಪ ಇದೀಗ ಕೇಳಿ ಬರುತ್ತಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 93ಕೋಟಿ ನಗದು, 10,895 ವಾಹನಗಳ ವಶ, 31,850 ಪ್ರಕರಣಗಳ ದಾಖಲೆ, 1439 ಎಫ್ಐಆರ್ ದಾಖಲು, 458 ಪ್ರಕರಣಗಳಿಗೆ ನ್ಯಾಯಾಲಯದಲ್ಲಿ ಎಫ್ಐಆರ್ ದಾಖಲಾಗಿರುವುದು ರಾಜ್ಯ ಸಕರ್ಾರ ಕೇಂದ್ರದ ಭಾರತೀಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಲ್ಲಿಸಿರುವ ತ್ರೈಮಾಸಿಕ ವರದಿಯ ಮೂಲಕ ಬೆಳಕಿಗೆ ಬಂದಿದೆ.

ಬಳ್ಳಾರಿ, ಚಿತ್ರದುರ್ಗ, ಮೈಸೂರು, ಗದಗ ಸೇರಿದಂತೆ ಮತ್ತಿತರ ಕಡೆ ಅಕ್ರಮ ಗಣಿಗಾರಿಕೆ ಚಟುವಟಿಕೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಕಾನೂನು ಬಾಹಿರವಾಗಿ ಚಟುವಟಿಕೆ ನಡೆಸುವವರ ಮೇಲೆ 1957ರ ಗಣಿ ಅಭಿವೃದ್ಧಿ ನಿಯಂತ್ರಣ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ನ್ಯಾಯಾಲಯ ಸೂಚನೆ ಕೊಟ್ಟಿತ್ತಾದರೂ ಅದನ್ನು ಸಮರ್ಪಕವಾಗಿ ಪಾಲಿಸುವಲ್ಲಿ ಸರ್ಕಾರ ಎಡವಿರುವುದು ಕಂಡು ಬಂದಿದೆ.

2013ರಿಂದ 2017ರವರೆಗೆ ಗೃಹ, ಕಂದಾಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅಲ್ಲಲ್ಲಿ ದಾಳಿ ನಡೆಸಿ ನೈಸರ್ಗಿಕವಾಗಿ ಅತ್ಯಮೂಲ್ಯವಾದ ಸಂಪನ್ಮೂಲವನ್ನು ರಕ್ಷಣೆ ಮಾಡಲು ತೆಗೆದುಕೊಂಡ ಕ್ರಮದ ಭಾಗವಾಗಿ ಹಲವರ ವಿರುದ್ಧ ದೂರು ದಾಖಲಾಗಿದೆ.

2013-14ರಲ್ಲಿ 8509, 2014-15ರಲ್ಲಿ 8464, 2015-16ರಲ್ಲಿ 9185 ಹಾಗೂ 2016-17ರಲ್ಲಿ 5692 ಪ್ರಕರಣಗಳು ದಾಖಲಾಗಿವೆ. ಪ್ರತೀ ದಿನ ವಿವಿಧೆಡೆ ಸರಾಸರಿ 22 ಪ್ರಕರಣಗಳು ದಾಖಲಾಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿರುವುದನ್ನು ಕಾಣಬಹುದಾಗಿದೆ.

ಒಟ್ಟಾರೆ ಅಕ್ರಮ ಗಣಿಗಾರಿಕೆಯಿಂದ ಅಕ್ರಮ ಹಣ ಸಂಪಾದನೆಯಾಗುತ್ತಿರುವುದಲ್ಲದೆ, ಪರಿಸರದ ಮೇಲೆಯೂ ಪರಿಣಾಮ ಬೀರುತ್ತಿದೆ. ಆದರೆ ಇದರ ಬಗ್ಗೆ ಕ್ರಮಕೈಗೊಳ್ಳಬೇಕಾದ ಸರ್ಕಾರ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ.

See also  ಘೋಷಿತ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಮುಂದುವರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು