News Kannada
Wednesday, November 30 2022

ಬೆಂಗಳೂರು ನಗರ

ಕೆಎಸ್ಆರ್ ಟಿಸಿಯಿಂದ ಹೆಚ್ಚುವರಿ ಬಸ್ ಸೇವೆ - 1 min read

Photo Credit :

ಕೆಎಸ್ಆರ್ ಟಿಸಿಯಿಂದ ಹೆಚ್ಚುವರಿ ಬಸ್ ಸೇವೆ

ಬೆಂಗಳೂರು: ವಾರಾಂತ್ಯ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಸಾರ್ವತ್ರಿಕ ರಜೆಯಿರುವ ಕಾರಣ ಪ್ರವಾಸ ತೆರಳುವವರು ಮತ್ತು ತಮ್ಮ ಊರುಗಳಿಗೆ ತೆರಳುವವರ ಸಂಖ್ಯೆ ಜಾಸ್ತಿ ಇರುವ ಕಾರಣದಿಂದ ಅವರ ಅನುಕೂಲಕ್ಕಾಗಿ ಆ.11 ಮತ್ತು 12ರಂದು 450 ರಿಂದ 500 ಹೆಚ್ಚುವರಿ ಬಸ್ಗಳು ಹಾಗೂ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು 15ರಂದು ವಿಶೇಷ ಕೆಎಸ್ಆರ್ಟಿಸಿ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ.

15ರಂದು ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಶಿರಸಿ, ಬಳ್ಳಾರಿ, ತಿರುಪತಿ ಸೇರಿದಂತೆ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ.

ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಮಡಿಕೇರಿ, ಕುಶಾಲನಗರ, ಕೊಡಗು ಮಾರ್ಗದ ಬಸ್ಗಳು ಸಂಚರಿಸಲಿದ್ದು, ಮಧುರೆ, ತಮಿಳುನಾಡು, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ತೆರಳುವ ಐಷಾರಾಮಿ ಬಸ್ಗಳು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ.

ವಿಜಯನಗರ, ಜೆಪಿ ನಗರ, ಜಯನಗರ 4ನೆ ಹಂತ, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಶಿವಮೊಗ್ಗ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಬೆಂಗಳೂರಿನಲ್ಲಿ 171, ಮೈಸೂರಿನಲ್ಲಿ 17, ಮಂಗಳೂರಿನಲ್ಲಿ 35 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 230 ಗಣಕೀಕೃತ ಬುಕ್ಕಿಂಗ್ ಕೌಂಟರ್ ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್ಗಳನ್ನು ಒಟ್ಟಿಗೆ ಕಾಯ್ದಿರಿಸಿದೆ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್ ಟಿಸಿ ಮೂಲಗಳು ತಿಳಿಸಿವೆ.

See also  ರಾಜ್ಯದಲ್ಲಿ ಎರಡು ದಿನ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು