News Kannada
Tuesday, November 29 2022

ಬೆಂಗಳೂರು ನಗರ

ಕೆಎಸ್ಓಯುಗೆ ಮಾನ್ಯತೆ ಕೊಡಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ - 1 min read

Photo Credit :

ಕೆಎಸ್ಓಯುಗೆ ಮಾನ್ಯತೆ ಕೊಡಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ಯುಜಿಸಿಯಿಂದ ಮಾನ್ಯತೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಯುಜಿಸಿ 2013-14ನೇ ಸಾಲಿನಿಂದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಮಾನ್ಯತೆಯನ್ನು ರದ್ದು ಮಾಡಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ಮಾನ್ಯತೆ ನೀಡುವ ಸಂಬಂಧ ಯುಜಿಸಿ ನೇಮಿಸಿದ ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಸಮಗ್ರ ವರದಿಯನ್ನು ಯುಜಿಗೆ ಸಲ್ಲಿಸಲಾಗಿದೆ. ಅಗತ್ಯ ದಾಖಲೆಯನ್ನು ಯುಜಿಸಿಗೆ ಸಲ್ಲಿಸಲಾಗಿದೆ. ಆದರೆ ಇದುವರೆಗೆ ಮಾನ್ಯತೆ ಲಭಿಸಿಲ್ಲ ಎಂದು ಪತ್ರದಲ್ಲಿ ವಿವರವಾಗಿ ವಿವರಿಸಿದ್ದಾರೆ.

ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಯದಲ್ಲಿ ಸಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಯುಜಿಸಿಯ ಅಮಾನ್ಯತೆಯಿಂದ ವಿದ್ಯಾರ್ಥಿಗಳ ಸರಿಯಾದ ಸಮಯದಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ನಿರಂತರವಾಗಿ ನನ್ನ ಬಳಿ ಈ ಸಂಬಂಧ ಚೆರ್ಚೆ ನಡೆಸಿದ್ದಾರೆ. ಜೂನ್ 21 ರಂದು ಕೇಂದ್ರ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಚೆರ್ಚೆಯನ್ನು ಆಧರಿಸಿ ಯುಜಿಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದುವರೆಗೆ ಯುಜಿಸಿ ಈ ಬಗ್ಗೆ ಯಾವುದೇ ಮಾತು ಕತೆ ನಡೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ. ವಿದ್ಯಾರ್ಥಿ ಸಮೂಹ ಯುಜಿಸಿಯ ನಿರ್ಧಾರವನ್ನು ಕಾತರದಿಂದ ಕಾಯುತ್ತಿದ್ದು ಪ್ರಧಾನಿಗಳು ಖುದ್ದು ಮುತುವರ್ಜಿ ವಹಿಸಿ ಯುಜಿಸಿಗೆ ಧನಾತ್ಮಕ ನಿರ್ಧಾರ ತೆಗೆದುಕೊಳ್ಳುವ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕಿದೆ ಎಂದು ಪತ್ರದಲ್ಲಿ ವಿನಂತಿಸಿದ್ದಾರೆ.

 

See also  ಉಯ್ಯಾಲೆಯ ತಂತಿಗೆ ಸಿಲುಕಿ 11 ವರ್ಷದ ಬಾಲಕಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು