News Kannada
Monday, December 05 2022

ಬೆಂಗಳೂರು ನಗರ

ಇಂದು ಸಚಿವ ಸಂಪುಟ ವಿಸ್ತರಣೆ: ಗೃಹ ಖಾತೆ ಯಾರಿಗೆ?

Photo Credit :

ಇಂದು ಸಚಿವ ಸಂಪುಟ ವಿಸ್ತರಣೆ: ಗೃಹ ಖಾತೆ ಯಾರಿಗೆ?

ಬೆಂಗಳೂರು: ಇಂದು ಸಂಜೆ 5ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಎಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪೂರ ಹಾಗೂ ಗೀತಾ ಮಹದೇವ ಪ್ರಸಾದ್ ಅವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ವಿಧಾನಪರಿಷತ್ತಿನ ಸದಸ್ಯರಾದ ಎಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪೂರ ಹಾಗೂ ವಿಧಾನಸಭಾ ಸದಸ್ಯೆ ಗೀತಾ ಮಹದೇವ ಪ್ರಸಾದ್ ಸೇರ್ಪಡೆಯಾಗುವುದು ಖಚಿತವಾಗಿದೆ.

 ಗೃಹ ಖಾತೆ ಯಾರಿಗೆ ಧಕ್ಕುತ್ತದೆ: ಗೃಹ ಸಚಿವ ಸ್ಥಾನ ಯಾರಿಗೆ ಸಿಗಬಹುದು ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ. ಪರಮೇಶ್ವರ ರಾಜೀನಾಮೆಯಿಂದ ತೆರವಾಗಿರುವ ಗೃಹ ಸಚಿವ ಖಾತೆ ಮುಖ್ಯಮಂತ್ರಿ ಬಳಿಯೇ ಇದೆ. ಅರಣ್ಯ ಖಾತೆ ಸಚಿವ ಬಿ. ರಮಾನಾಥ ರೈ ಅವರಿಗೆ ಈ ಖಾತೆ ವಹಿಸುವಂತೆ ಹೈಕಮಾಂಡ್ ಸೂಚನೆ ನೀಡಿತ್ತು.ಈ ಸಂಬಂಧ ರೈ ಜತೆಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದರು.
ಆದರೆ ‘ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಆರ್ ಎಸ್ ಎಸ್ ಕಾರ್ಯಕರ್ತರ ಮೇಲಿನ ದೌರ್ಜನ್ಯ ಹಾಗೂ ಕೊಲೆಗಳಿಗೆ ಸಚಿವ ರೈ ಕಾರಣ’ ಎಂದು ಆರೋಪಿಸಿರುವ ಬಿಜೆಪಿ, ಅವರ ರಾಜೀನಾಮೆಗೆ ಆಗ್ರಹಿಸಿ ಮಂಗಳೂರು ಚಲೋ ಹಮ್ಮಿಕೊಂಡಿದೆ. ಈ ಹೊತ್ತಿನಲ್ಲಿ ರೈಗೆ ಗೃಹ ಖಾತೆ ನೀಡಿದರೆ, ಅದನ್ನು ವಿರೋಧಿಸಿ ಉಗ್ರ ಹೋರಾಟ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಹೀಗಾಗಿ, ರೈ ಬದಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿದ ಬಳಿಕ, ಖಾತೆ ಮರು ಹಂಚಿಕೆ ಮಾಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ಶುಕ್ರವಾರ ಸಂಜೆಯ ಹೊತ್ತಿಗೆ ಗೃಹ ಖಾತೆ ಯಾರಿಗೆ ಸಿಗಲಿದೆ ಎಂಬುದು ಖಚಿತವಾಗಲಿದೆ.

See also  ರಾಜ್ಯದಾದ್ಯಂತ ಯೋಗ ಅಭಿಯಾನ ನಡೆಸುವಂತೆ ಸಿಎಂ ಬೊಮ್ಮಾಯಿ ಸಲಹೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು