News Kannada
Tuesday, October 04 2022

ಬೆಂಗಳೂರು ನಗರ

ನವೆಂಬರ್ 1 ರಿಂದ ರಾಜ್ಯದಲ್ಲಿ ಬಿಜೆಪಿ ಯಾತ್ರೆ! - 1 min read

Photo Credit :

ನವೆಂಬರ್ 1 ರಿಂದ ರಾಜ್ಯದಲ್ಲಿ ಬಿಜೆಪಿ ಯಾತ್ರೆ!

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಮತದಾರರನ್ನು ಸೆಳೆಯುವ ಮತ್ತು ಚುನಾವಣೆಗೆ ಬೇಕಾದ ತಂತ್ರಗಳನ್ನು ಮಾಡುವಲ್ಲಿ ವಿವಿಧ ಕಾರ್ಯಕ್ರಮಗಳನ್ನು ಬಿಜೆಪಿ ಸತತವಾಗಿ ಮಾಡುತ್ತಲೇ ಬರುತ್ತಿದ್ದು ಅದರ ಮುಂದುವರೆದ ಭಾಗವಾಗಿ ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ನ.1ರಿಂದ ಜನವರಿ 15ರ ವರೆಗೆ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಹಮ್ಮಿಕೊಂಡಿದೆ.

ಈ ವೇಳೆ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಶೀಘ್ರದಲ್ಲೇ ದಾಖಲೆಗಳ ಸಮೇತ ಬಿಡುಗಡೆ ಮಾಡುವುದು, ಕುಸಿದಿರುವ ಕಾನೂನು ಸುವ್ಯವಸ್ಥೆ, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸುವುದನ್ನು ಕೂಡ ಈ ಯಾತ್ರೆಯಲ್ಲಿ ಸೇರಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಯಾತ್ರೆ ಸಂಚರಿಸಲಿದೆ. ಯಾತ್ರೆ ವೇಳೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಲಿದ್ದಾರೆ. ಇದರಲ್ಲಿ ಸುಮಾರು 3 ಲಕ್ಷದ 30 ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದು, ಬೆಂಗಳೂರಿನಿಂದ ಯಾತ್ರ್ರೆ ಆರಂಭವಾಗಲಿದೆ.

ಉತ್ತರ ಪ್ರದೇಶ, ಉತ್ತರ ಖಂಡ, ಮಣಿಪುರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತ ಕಳೆದುಕೊಂಡಿದೆ. ಇದೇ ರೀತಿ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತಗೊಳಿಸುವುದು ಯಾತ್ರೆಯ ಗುರಿ ಎನ್ನಲಾಗಿದೆ.

ಯಾತ್ರೆ ಕುರಿತಂತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿ ಬೂತ್ ನಲ್ಲಿ ಕನಿಷ್ಟ 50 ರಿಂದ 100 ಮತಗಳು  ಬಿಜೆಪಿಗೆ ಬರುವಂತೆ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದ್ದು, ಚುನಾವಣೆಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇನ್ನೂ ಎರಡು-ಮೂರು ಸಭೆಗಳು ನಡೆಯಲಿವೆ. ಬಳಿಕ ಕಾರ್ಯಕರ್ತರ ಅಭಿಪ್ರಾಯದಂತೆ ಪ್ರಕ್ರಿಯೆ ನಡೆಯಲಿದೆ. ಯಾವುದೇ ಸಂದರ್ಭದಲ್ಲಿ ಎದುರಾಗುವ ಚುನಾವಣೆ ಎದುರಿಸಲು ಕಾರ್ಯಕರ್ತರು ಸಜ್ಜಾಗಬೇಕೆಂದು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲು ದರೋಡೆ ನಡೆಸುತ್ತಿದ್ದಾರೆ. ಸಂಪುಟದ ಸಚಿವರು, ಅವರ ಕುಟುಂಬದವರು, ಶಾಸಕರು ನಡೆಸಿರುವ ದಾಖಲೆಗಳು ನಮ್ಮ ಬಳಿ ಇವೆ. ಬಿಬಿಎಂಪಿಯಲ್ಲಿ ನಡೆಸಿರುವ ಭ್ರಷ್ಟಾಚಾರದ ದಾಖಲೆಗಳನ್ನು ಸಂಗ್ರಹಿಸಿದ್ದೇವೆ. ಮೂರ್ನಾಲ್ಕು ದಿನಗಳಲ್ಲಿ ಅಧಿಕೃತ ದಾಖಲೆ ಬಿಡುಗಡೆ ಮಾಡುವುದಾಗಿಯೂ ಹೇಳಿದ್ದಾರೆ.

 

See also  ಸದನವನ್ನು ನಗೆಕಡಲಿಗೆ ತಳ್ಳಿದ ರಮೇಶ್ ಕುಮಾರ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು