News Kannada
Saturday, October 01 2022

ಬೆಂಗಳೂರು ನಗರ

ಮತ್ತೆ ಜಾರ್ಜ್ ವಿರುದ್ಧ ಬಿಜೆಪಿ ಚಾರ್ಜ್ - 1 min read

Photo Credit :

ಮತ್ತೆ ಜಾರ್ಜ್ ವಿರುದ್ಧ ಬಿಜೆಪಿ ಚಾರ್ಜ್

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸುವುದು ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ ಹೋರಾಟವನ್ನು ನಡೆಸಲು ಬಿಜೆಪಿ ತೀರ್ಮಾನಿಸಿರುವುದಾಗಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯ ನಂತರ ಅವರು ಮಾಧ್ಯಮದೊಂದಿಗೆ ಮಾತನಾಡಿ ಜಾರ್ಜ್ ರಾಜೀನಾಮೆಗೆ ಸೆ.26ರಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿರುವುದಾಗಿಯೂ ಇದೇ ವೇಳೆ ತಿಳಿಸಿದರು. ಸೆ.21 ಮತ್ತು 22 ರಂದು ಕೇಂದ್ರ ಮಾನವ ಸಂಪನ್ಮೂಲ ಸಚಿವರೂ ಬಿಜೆಪಿ ಚುನಾವಣಾ ಉಸ್ತುವಾರಿಗಳೂ ಆದ ಪ್ರಕಾಶ್ ಜಾವಡೇಕರ್ ಅವರು ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ವಿವಿಧ ಹೋರಾಟಗಳನ್ನು ನಡೆಸುವುದಾಗಿ ಹೇಳಿದರು.

ಅ.12ರಂದು ರೈಲ್ವೇ ಸಚಿವ, ಸಹ ಉಸ್ತುವಾರಿಗಳೂ ಆದ ಪಿಯೂಶ್ ಗೋಯಲ್ ಅವರು ಹಾಗೂ ಜಾವಡೇಕರ್ ಬೆಂಗಳೂರಿಗೆ ಆಗಮಿಸಲಿದ್ದು, ಸಭೆ, ಸಮಾರಂಭ ನಡೆಸಲಿದ್ದಾರೆ. ಈ ನಡುವೆ ಸೆ.20ರಂದು ಕೊಪ್ಪಳದಲ್ಲಿ ನೀರಾವರಿ ಯೋಜನೆಗಳು ಕುಂಠಿತಗೊಂಡಿರುವುದನ್ನು ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ, ಅಕ್ಟೋಬರ್ 23ಕ್ಕೆ ವಿಜಯಪುರ ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆ ವಿಳಂಬ ವಿರೋಧಿಸಿ ಪ್ರತಿಭಟನೆ ನಡೆಯಲಿದೆ.

ಅಕ್ಟೋಬರ್ 22ರಂದು ಬೀಳಗಿಯಲ್ಲಿ ಎಸ್ಸಿ, ಎಸ್ಟಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 1 ಮತ್ತು 2ರಂದು ರಾಜ್ಯದ ಚುನಾವಣೆ ಮುಕ್ತಾಯದ ವರೆಗೆ ವಿಸ್ತಾರಕರಾಗಿ ಕಾರ್ಯ ನಿರ್ವಹಿಸುವವರಿಗಾಗಿ ಕಾರ್ಯಾಗಾರ ನಡೆಯಲಿದ್ದು 300 ಮಂದಿ ವಿಸ್ತಾರಕರಾಗಿ ಕಾರ್ಯ ನಿರ್ವಹಿಸುವ ಯೋಜನೆ ಸಿದ್ಧಪಡಿಸಲಾಗಿದೆ. ನವೆಂಬರ್ 1 ರಿಂದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿರುವ ರಾಜ್ಯ ಬಿಜೆಪಿ ಅಧ್ಯಕ್ಷರ ನೇತೃತ್ವದ ಪರಿವರ್ತನಾ ಯಾತ್ರೆ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರಕವಾಗಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ನವಶಕ್ತಿ ಸಮಾವೇಶ ನಡೆಯಲಿದೆ ಎಂದು ಇದೇ ವೇಳೆ ಅರವಿಂದ್ ಲಿಂಬಾವಳಿ ಅವರು ತಿಳಿಸಿದರು.

See also  ಬಿಜೆಪಿಯಿಂದ ಮೈತ್ರಿ ಶಾಸಕರಿಗೆ ಆಮಿಷ ಆರೋಪ: ಸಾಬೀತಾದರೆ ರಾಜಕೀಯ ನಿವೃತ್ತಿ ನೀಡುತ್ತೇನೆ_ಬಿಎಸ್ ವೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು