News Kannada
Friday, October 07 2022

ಬೆಂಗಳೂರು ನಗರ

ಬಿಜೆಪಿ ಹೈಕಮಾಂಡ್ ನಿಂದ ರಾಜ್ಯದ ನಾಯಕರಿಗೆ ಹೊಸ ಶಾಕ್ - 1 min read

Photo Credit :

ಬಿಜೆಪಿ ಹೈಕಮಾಂಡ್ ನಿಂದ ರಾಜ್ಯದ ನಾಯಕರಿಗೆ ಹೊಸ ಶಾಕ್

ಬೆಂಗಳೂರು: ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರಿಗೆ ಮತ್ತೆ ಬಿಸಿ ಮುಟ್ಟಿಸಿದೆ. ಈವರೆಗೆ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಿಕೊಂಡು ಬಂದಿರುವ ನಾಯಕರಿಗೆ ತಮ್ಮ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸೂಚನೆ ನೀಡಿದೆ ಎನ್ನಲಾಗಿದ್ದು, ಇದು ಹಲವು ನಾಯಕರಿಗೆ ಬಿಸಿ ತುಪ್ಪವಾಗಿದೆ.

ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಉತ್ತರ ಕರ್ನಾಟಕದಿಂದ ಕಣಕ್ಕಿಳಿಸಲು ಪಕ್ಷದ ಚಿಂತಕರ ಛಾವಡಿ ತೀರ್ಮಾನಿಸಿತ್ತು. ಇದೀಗ ಪ್ರಮುಖ ನಾಯಕರನ್ನು ಕ್ಷೇತ್ರ ಬದಲಾಯಿಸುವಂತೆ ಸೂಚನೆ ನೀಡಿದೆ. ಇದೀಗ ಹೈಕಮಾಂಡ್ ತೀರ್ಮಾನಕ್ಕೆ ಮರು ಮಾತನಾಡದೆ ಕ್ಷೇತ್ರ ಬದಲಾಯಿಸುವುದು ರಾಜ್ಯದ ನಾಯಕರಿಗೆ ಅನಿವಾರ್ಯವಾಗಲಿದೆ. ರಾಜಕೀಯ ಮೂಲಗಳ ಪ್ರಕಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ , ಮಾಜಿ ಸಚಿವರಾದ ಆರ್.ಅಶೋಕ್, ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರಿಗೆ ಇದು ಅನ್ವಯವಾಗಲಿದೆ.

ಇದರಿಂದ ಕೆಲವು ವರ್ಷಗಳಿಂದ ತಮ್ಮದೇ ಭದ್ರ ಕೋಟೆ ಕಟ್ಟಿಕೊಂಡಿದ್ದ ನಾಯಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಯಾವ ಕ್ಷೇತ್ರದಲ್ಲಿ ಪಕ್ಷ ದುರ್ಬಲವಾಗಿದೆಯೋ ಅಲ್ಲಿ ಘಟಾನುಘಟಿಗಳನ್ನು ಸ್ಪರ್ಧಿಸುವಂತೆ ಮಾಡಿ ಪಕ್ಷದ ಸಂಘಟನೆ ಮಾಡುವಂತೆ ಸೂಚಿಸಲಾಗುತ್ತಿದೆ. ಇದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ತಂತ್ರವಾಗಿದ್ದು, ಇದು ಎಷ್ಟರ ಮಟ್ಟಿಗೆ ಉಪಯೋಗವಾಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.

ಈ ನಡುವೆ ಇಂದಿನಿಂದ ಮೂರು ದಿನಗಳ ಕಾಲ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಕಲಬುರಗಿ, ಬೀದರ್ ಮತ್ತು ವಿಜಾಪುರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಇಲ್ಲಿ ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಪದಾಧಿಕಾರಿಗಳನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಕಾರ್ಯ ತಂತ್ರ ರೂಪಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ಈ ಭಾಗದ ಸ್ಥಿತಿಗತಿ ಕುರಿತಂತೆ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿ, ಬಳಿಕ ಯಾರು, ಯಾವ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಅಮಿತ್ ಶಾ ತಂತ್ರಗಳು ರಾಜ್ಯದ ಕೆಲವು ನಾಯಕರಿಗೆ ವರದಾನವಾದರೆ ಮತ್ತೆ ಕೆಲವರಿಗೆ ಸಂಕಷ್ಟ ಎಂದರೂ ತಪ್ಪಾಗಲಾರದು. ಇದೆಲ್ಲದರ ಒಟ್ಟಾರೆ ಫಲಿತಾಂಶಕ್ಕೆ ಮುಂದಿನ ದಿನಗಳನ್ನು ಎದುರು ನೋಡಬೇಕಾಗಿದೆ

See also  ಉತ್ತಮ ನಡವಳಿಕೆ ತೋರಿಸಿದ 141 ಮಂದಿ ಕೈದಿಗಳ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು