News Kannada
Saturday, October 01 2022

ಬೆಂಗಳೂರು ನಗರ

ಉಜ್ವಲ ಭವಿಷ್ಯಕ್ಕಾಗಿ ನವಕರ್ನಾಟಕ 2025 ಯೋಜನೆ - 1 min read

Photo Credit :

ಉಜ್ವಲ ಭವಿಷ್ಯಕ್ಕಾಗಿ ನವಕರ್ನಾಟಕ 2025 ಯೋಜನೆ

ಬೆಂಗಳೂರು: ರಾಜ್ಯದ ಉಜ್ವಲ ಭವಿಷ್ಯಕ್ಕಾಗಿ ಕಾರ್ಯಸೂಚಿ ರೂಪಿಸಲು ಜನ ಸಾಮಾನ್ಯರ ಸಹಭಾಗಿತ್ವದಲ್ಲಿ ನವಕರ್ನಾಟಕ 2025 ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ, ನವಕರ್ನಾಟಕ ಮುನ್ನೋಟದಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ನಮ್ಮ ಮುಂದಿನ ಚುನಾವಣಾ ಪ್ರಣಾಳಿಕೆಯಲ್ಲೂ ಸಹ ಅಳವಡಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಖಾಸಗಿ ಹೊಟೇಲ್ ನಲ್ಲಿ ಹಮ್ಮಿಕೊಂಡಿದ್ದ ನವಕರ್ನಾಟಕ 2025 ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ ಅವರು, ನವಕರ್ನಾಟಕ ಕಟ್ಟುವ ಕನಸು ನಮ್ಮದು, ಬದ್ಧತೆಯಿಂದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಕೇವಲ ಕನಸು ಕಂಡರೆ ಸಾಲದು, ಅದು ನನಸಾಗಬೇಕಾದರೆ ಒಂದು ಮುನ್ನೋಟ ಅಗತ್ಯ, ಅದಕ್ಕಾಗಿಯೇ ಇಡಿ ರಾಜ್ಯದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಕುರಿತು ನವಕರ್ನಾಟಕ 2025 ಯೋಜನೆಯನ್ನು ರೂಪಿಸಲಾಗುವುದು ಎಂದು ಹೇಳಿದರು.

ಜನರ ಸಹಭಾಗಿತ್ವದಲ್ಲಿ ನಡೆಯುವ ಈ ಮುನ್ನೋಟ ಸಿದ್ಧಪಡಿಸುವ ಕಾರ್ಯ ಮುಂದಿನ ಮೂರು ತಿಂಗಳು ರಾಜ್ಯಾದ್ಯಂತ ನಡೆಯಲಿದ್ದು, ಪ್ರತಿ ಜಿಲ್ಲೆಯ ಜನ ಸಾಮನ್ಯರ ಬೇಡಿಕೆಗಳು ಮತ್ತು ಅಭಿಪ್ರಾಯಗಳು, ನೀರಿಕ್ಷೆಗಳ ಆಧಾರದ ಮೇಲೆ ಅಧಿಕಾರಿಗಳು ರಾಜ್ಯದ ಮುನ್ನೋಟ ತಯಾರಿಸಲಿದ್ದಾರೆ. ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಜನರಿಗೆ ಪ್ರಣಾಳಿಕೆ ಮೂಲಕ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ. ರಾಜ್ಯ ಪ್ರಗತಿ ಸಹ ಸಾಧಿಸಿದೆ. ನವ ಕರ್ನಾಟಕದ ಅಭಿವೃದ್ಧಿ ಸಾಧನೆಗೆ ಹಲವು ವಲಯಗಳಲ್ಲಿ ಸಾಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಸರ್ಕಾರ ಜಾರಿಗೆ ತಂದಿರುವ ಹತ್ತು ಹಲವು ಯೋಜನೆಗಳು ಜನ ಸಾಮಾನ್ಯರಿಗೆ ತಲುಪಿವೆ. ಬಂಡವಾಳ ಹೂಡಿಕೆಯಲ್ಲಿ ರಾಜ್ಯ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೈಗಾರಿಕೆ ಸ್ನೇಹಿ ರಾಜ್ಯ ಎಂಬ ಹೆಗ್ಗಳಿಕೆಗೂ ಸಹ ಪಾತ್ರವಾಗಿದೆ. 2018ರ ಅಕ್ಟೋಬರ್ 2ಕ್ಕೆ ಕರ್ನಾಟಕ ಬಯಲು ಬಹಿರ್ದೆಸೆ ಮುಕ್ತ ರಾಜ್ಯವಾಗಲಿದೆ. ಈಗಾಗಲೇ 30 ಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿದ್ದೇವೆ. 50 ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ನಾಲ್ಕೂವರೆ ವರ್ಷದಲ್ಲಿ 12 ಲಕ್ಷ ಮನೆಗಳನ್ನು ಕಟ್ಟಲಾಗಿದೆ, ರಾಜ್ಯವನ್ನು ಗುಡಿಸಲು ಮುಕ್ತ ಮಾಡುವ ಪ್ರಯತ್ನ ಮುಂದುವರೆಯುತ್ತದೆ ಎಂದು ಹೇಳಿದರು.

ಉದ್ಘಾಟನೆಯ ನಂತರ ಪತ್ರಕರ್ತರ ಹಲವು ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವುದು ಹಾಗೂ ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡುವುದನ್ನು ಸ್ವಾಗತಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ, ವಿಷನ್ 2025 ಯೋಜನೆಯ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ರೇಣುಕಾ ಚಿದಂಬರಮ್ ಸೇರಿದಂತೆ ಅನೇಕ ಉನ್ನತಾಧಿಕಾರಿಗಳು ಭಾಗವಹಿಸಿದ್ದರು

See also  ಬರಿದಾಗುತ್ತಿದೆ ರಾಜ್ಯದ ಖಜಾನೆ... ಅನುದಾನಗಳಿಗೆ ಹಣದ ಕೊರತೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು