News Kannada
Saturday, September 24 2022

ಬೆಂಗಳೂರು ನಗರ

ಆಮಂತ್ರಣ ಪತ್ರಿಕೆಗೆ ಹೆಸರು ಹಾಕಬೇಡಿ ಎಂದ ಕೇಂದ್ರ ಸಚಿವ - 1 min read

Photo Credit :

ಆಮಂತ್ರಣ ಪತ್ರಿಕೆಗೆ ಹೆಸರು ಹಾಕಬೇಡಿ ಎಂದ ಕೇಂದ್ರ ಸಚಿವ

ಬೆಂಗಳೂರು: ಭಾರೀ ವಿರೋಧ ವ್ಯಕ್ತವಾದರೂ ಟಿಪ್ಪು ಜಯಂತಿ ಆಚರಣೆಯಲ್ಲಿ ತೊಡಗಿರುವ ರಾಜ್ಯ ಸರ್ಕಾರದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿಸುವುದು ಬೇಡ ಎಂದು ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಅನಂತ್ ಕುಮಾರ್ ಹೆಗಡೆ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ತಿಂಗಳು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಹೊರಟಿದೆ. ಇದರ ಹಿನ್ನೆಲೆಯಲ್ಲಿ ಆಮಂತ್ರಣ ಪತ್ರಿಕೆ ತಯಾರಿಸುವಾಗ ನನ್ನ ಹೆಸರನ್ನು ನಮೂದಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಅನಂತ ಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ ಎಂದು ಸಚಿವರ ನಿಕಟ ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರು ಹಿಂದಿನಿಂದಲೂ ಟಿಪ್ಪು ಜಯಂತಿ ಆಚರಣೆ ವಿರುದ್ಧವಾಗಿದ್ದರು. ರಾಜ್ಯ ಸರ್ಕಾರದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಾನು ಭಾಗವಹಿಸಲ್ಲ ಎಂದು ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ತನ್ನ ಆಪ್ತ ಕಾರ್ಯದರ್ಶಿ ಮೂಲಕ ಪತ್ರ ಬರೆದಿದ್ದಾರೆ.

See also  ಚಂದ್ರು ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲು ನಿರ್ಧರಿಸಲಾಗಿದೆ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು