News Kannada
Thursday, December 01 2022

ಬೆಂಗಳೂರು ನಗರ

ಉದ್ಯಮಿ ವಿದ್ವತ್ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಶರಣು

Photo Credit :

ಉದ್ಯಮಿ ವಿದ್ವತ್ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಶರಣು

ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ (24) ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಗೂಂಡಾ ಮೊಹಮದ್ ನಲಪಾಡ್ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಹ್ಯಾರಿಸ್ರ ಶಾಂತಿನಗರ ನಿವಾಸಕ್ಕೆ ಅಶೋಕನಗರ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕ ಎನ್.ಎ.ಹ್ಯಾರಿಸ್ ಅವರು ತನ್ನ ಮಗನಿಗೆ ಶರಣಾಗಲು ಹೇಳಿದ್ದಾರೆ. ನಂತರ ನಲಪಾಡ್ನನ್ನು ಕಬ್ಬನ್ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆತನಿಗೆ ರಾಜ ಮರ್ಯಾದೆ ಕೊಟ್ಟು ಕರೆದುಕೊಂಡು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಯುಬಿ ಸಿಟಿಯ ‘ಫರ್ಜಿ ಕೆಫೆ’ಯಲ್ಲಿ ಶನಿವಾರ ರಾತ್ರಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ನೆಪವೊಡ್ಡಿ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಾಗೂ ಆತನರ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಸೋ ಇಚ್ಛೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಸದ್ಯ ಮಲ್ಯ ಆಸ್ಪತ್ರೆಯ ಐಸಿಯುನಲ್ಲಿ ವಿದ್ವತ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಈ ಹಲ್ಲೆಯನ್ನು ಖಂಡಿಸಿ ಬಿಜೆಪಿಯವರು ಮೊಹಮದ್ ನಲಪಾಡ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಕಬ್ಬನ್ ಪಾರ್ಕ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

See also  ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು