News Kannada
Friday, September 30 2022

ಬೆಂಗಳೂರು ನಗರ

ಪರಪ್ಪನ ಅಗ್ರಹಾರದಲ್ಲಿ ವಿಕೃತ ಕಾಮಿ ಸೈಕೋ ಜೈಶಂಕರ್ ಆತ್ಮಹತ್ಯೆಗೆ ಶರಣು - 1 min read

Photo Credit :

ಪರಪ್ಪನ ಅಗ್ರಹಾರದಲ್ಲಿ ವಿಕೃತ ಕಾಮಿ ಸೈಕೋ ಜೈಶಂಕರ್ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪೊಲೀಸ್ ಪೇದೆಯ ಪತ್ನಿ ಸೇರಿದಂತೆ ಸುಮಾರು 19ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಹಲವು ಕೊಲೆ ಮಾಡಿದ ವಿಕೃತ ಕಾಮಿ ಸೈಕೋ ಜೈ ಶಂಕರ್ ಸೋಮವಾರ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಪ್ಲೇಡ್ ನಿಂದ ಕತ್ತು ಕೊಯ್ದುಕೊಂಡು ಆತ್ಯಹತ್ಯೆಗೆ ಶರಣಾಗಿದ್ದಾನೆ.

ಈತನನ್ನು ಜೈಲಿನಲ್ಲಿ ಪ್ರತ್ಯೇಕ ಸೆಲ್ ನಲ್ಲಿ ಕೂಡಿ ಹಾಕಲಾಗಿತ್ತು. ಸೋಮವಾರ ಸುಮಾರು ರಾತ್ರಿ 2ಗಂಟೆಗೆ ಪ್ಲೇಡ್ ನಿಂದ ಕತ್ತು ಕೊಯ್ದುಕೊಂಡಿದ್ದಾನೆ. ಕೂಡಲೇ ಆತನಿಗೆ ಜೈಲಿನಲ್ಲೇ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡ ಹೋಗಿದ್ದಾರೆ. ಆದರೆ ದಾರಿ ಮಧ್ಯೆ ಶಂಕರ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಈತ ಕಳೆದ ಎರಡು ವರ್ಷಗಳ ಹಿಂದೆ ಜೈಲಿನ ತಡೆ ಗೋಡೆಯನ್ನು ಹಾರಿ ಜೈಲಿನಿಂದ ಎಸ್ಕೇಪ್ ಆಗಲು ಪ್ರಯತ್ನಿಸಿ ಸೊಂಟ ಮುರಿದುಕೊಂಡಿದ್ದ. ಬಳಿಕ ಆತನಿಗೆ ಜೈಲಿನಲ್ಲೇ ಚಿಕಿತ್ಸೆಯನ್ನು ನೀಡಲಾಯಿತು. ಈಚೆಗೆ ಮಾನಸಿಕವಾಗಿ ಜೈಶಂಕರ್ ಕುಗ್ಗಿ ಹೋಗಿದ್ದ ಎಂದು ತಿಳಿದು ಬಂದಿದೆ.

ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ ತಮಿಳುನಾಡಿನ ಸೇಲಂ ಮೂಲದವನು. ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ ಈತ ಪೊಲೀಸ್ ಪೇದೆಯ ಪತ್ನಿ ಮೇಲಿನ ಅತ್ಯಾಚಾರ ಪ್ರಕರಣ ಸೇರಿದಂತೆ ತಮಿಳುನಾಡಿನಲ್ಲಿ 11 ಮಹಿಳೆಯರು , ಕರ್ನಾಟಕದ ಲ್ಲಿ 4 ಮಹಿಳೆಯರ ಅತ್ಯಾಚಾರ, ಕೊಲೆ ಪ್ರಕರಣಗಳು ಈತನ ವಿರುದ್ಧ ದಾಖಲಾಗಿತ್ತು.

 

See also   “ಗಡಿನಾಡ ಚೇತನ” ಪ್ರಶಸ್ತಿ ಪ್ರದಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು