ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್ ಮೂಲಕ ಬಡಜನರ ಹಸಿವು ನೀಗಿಸುವ ಪ್ರಯತ್ನ ಮಾಡಿದ್ದು, ಈಗ ಸವಿರುಚಿ ಎನ್ನುವ ಸಂಚಾರಿ ಕ್ಯಾಂಟೀನ್ ಗೆ ಚಾಲನೆ ನೀಡಿದ್ದಾರೆ.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಸ್ತ್ರೀ ಶಕ್ತಿ ಒಕ್ಕೂಟಗಳು ಈ ಸವಿರುಚಿ ಮೊಬೈಲ್ ಕ್ಯಾಂಟೀನ್ ಆರಂಭಿಸಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಈ ಕಾರ್ಯಕ್ರಮ ಆರಂಭಿಸಲಾಗಿದೆ. ಜಿಲ್ಲೆಗೆ ಒಂದರಂತೆ ಇದನ್ನು ಆರಂಭಿಸಲಾಗುವುದು ಎಂದರು.
ಈ ಮೊಬೈಲ್ ಕ್ಯಾಂಟೀನ್ ನಿಂದ ಸ್ತ್ರೀ ಶಕ್ತಿ ಸಂಘಟನೆಗಳು ಆರ್ಥಿಕವಾಗಿ ಬೆಳೆಯಲು ಸಹಕಾರಿಯಾಗುವುದು. ಜಾತ್ರೆ, ಕೈಗಾರಿಕಾ ಪ್ರದೇಶ, ಶಾಲಾ ಕಾಲೇಜು ಸಹಿತ ಜನರು ಸೇರುವೆಡೆ ಈ ಮೊಬೈಲ್ ಕ್ಯಾಂಟೀನ್ ತಲುಪಲಿದೆ ಎಂದು ಅವರು ಹೇಳಿದರು.