ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆಗೊಂಡು ಜೆಡಿಎಸ್ ಪಕ್ಷದಿಂದ ಮುಂದಿನ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ಪಡೆದುಕೊಂಡಿದ್ದ ಎ.ಎಸ್. ಪಾಟೀಲ ನಡಹಳ್ಳಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪಾಟೀಲ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದರ ಬಳಿಕ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಅವರು ವಿಜಯಪುರ ಮತ್ತು ರಾಯಚೂರು ಭಾಗದಲ್ಲಿ ಸಕ್ರಿಯರಾಗಿದ್ದರು.
ಜೆಡಿಎಸ್ ನಿಂದ ಮುದ್ದೇಬಿಹಾಳ ಕ್ಷೇತ್ರಕ್ಕೆ ಅಭ್ಯರ್ಥಿಯೆಂದು ಕೂಡ ಘೋಷಣೆಯಾಗಿತ್ತು. ಆದರೆ ಹಠಾತ್ ಆಗಿ ತೆನೆಹೊತ್ತು ಮಹಿಳೆಯ ಬಿಟ್ಟು ಕಮಲ ಹಿಡಿದಿರುವ ಪಾಟೀಲ ಅವರು ಎಲ್ಲರನ್ನು ಅಚ್ಚರಿಗೀಡುಮಾಡಿದ್ದಾರೆ.