News Kannada
Monday, December 05 2022

ಬೆಂಗಳೂರು ನಗರ

ವಿಧಾನಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯ

Photo Credit :

ವಿಧಾನಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಮಂಗಳವಾರ ಕೊನೆಗೊಂಡಿತು.

ಮೇ 12ರಂದು ನಡೆಯಲಿರುವ ಚುನಾವಣೆಗೆ ಏ.17ರಿಂದ ಏ.24ರ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ಇಂದು ಕೊನೆಯ ದಿನ ಪ್ರಮುಖವಾಗಿ ಬಾದಾಮಿ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ನಾಮಪತ್ರ ಸಲ್ಲಿಸಿದರು.

ಮಂಡ್ಯದಲ್ಲಿ ಅಂಬರೀಷ್ ಅವರು ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರವಿ ಪಿ. ಗಣಿಗ ಅವರನ್ನು ಕಣಕ್ಕಿಳಿಸಿದೆ. ಅದೇ ವರುಣಾ ಕ್ಷೇತ್ರದಿಂದ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಕೈತಪ್ಪಿದ ಟಿಕೆಟ್ ತೋಟದಪ್ಪ ಬಸವರಾಜಪ್ಪ ಪಾಲಾಗಿದೆ. ತೋಟದಪ್ಪ ಬಸವರಾಜಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಏ.25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.27 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಮಂಗಳವಾರ ಮಧ್ಯಾಹ್ನ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.

See also  ಜೆಡಿಎಸ್ ಜತೆ ಮೈತ್ರಿಯಾದರೆ ಬಂಡಾಯ: ಕಾಂಗ್ರೆಸ್ ನಾಯಕನ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು