News Kannada
Friday, December 02 2022

ಬೆಂಗಳೂರು ನಗರ

ಮೋದಿ, ಬಿಎಸ್ ವೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಮೇವಾನಿ, ರೈ ವಿರುದ್ಧ ದೂರು

Photo Credit :

ಮೋದಿ, ಬಿಎಸ್ ವೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಮೇವಾನಿ, ರೈ ವಿರುದ್ಧ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ನಟ ಪ್ರಕಾಶ್ ರೈ ವಿರುದ್ಧ ಕರ್ನಾಟಕ ಬಿಜೆಪಿ ಘಟಕ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಲಾಗಿದೆ.

ಜಿಗ್ನೇಶ್ ಮೇವಾನಿ ಅವರು ಏ.29 ರಂದು ಬೆಂಗಳೂರಿನಲ್ಲಿ ಭಾಷಣ ಮಾಡುತ್ತಿದ್ದ ವೇಳೆಯಲ್ಲಿ “ಪ್ರಧಾನಿ ನರೇಂದ್ರ ಮೋದಿ ಒಬ್ಬ ಕಾರ್ಪೋರೇಟ್ ಸೇಲ್ಸ್ ಮನ್ ಮತ್ತು ಕಳ್ಳ. ಅವರು ದೇಶವನ್ನು ಕೊಳ್ಳೆಹೊಡೆದಿದ್ದಾರೆ” ಎಂದು ಹೇಳಿಕೆಯನ್ನು ನೀಡಿದ್ದರು.

ನರೇಂದ್ರ ಮೋದಿ ಮತ್ತು ಬಿ ಎಸ್ ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಮೇವಾನಿ ಮತ್ತು ರೈ ಮಾತನಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ದೂರಿನಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಅದಲ್ಲದೆ ಮನವಿಯಲ್ಲಿ ಜಿಗ್ನೇಶ್ ಮೇವಾನಿ ಮತ್ತು ಪ್ರಕಾಶ್ ರೈ ಅವರಿಗೆ ಕರ್ನಾಟಕದಲ್ಲಿ ಇನ್ನು ಮುಂದೆ ಯಾವುದೇ ಸಾರ್ವಜನಿಕ ಸಭೆ ನಡೆಸಲು ಅನುಮತಿ ನೀಡಬಾರದೆಂದು ಮನವಿ ಮಾಡಿದೆ.

 

See also  ಪಾಕಿಸ್ತಾನದಲ್ಲಿ ಹಿಂದೂಗಳು, ಕ್ರೈಸ್ತರು ಸುರಕ್ಷಿತ: ಅಬ್ದುಲ್‌ ಬಸಿತ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು