News Kannada
Sunday, November 27 2022

ಬೆಂಗಳೂರು ನಗರ

ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರವೂ ರಜೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು - 1 min read

Photo Credit :

ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರವೂ ರಜೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು

ಬೆಂಗಳೂರು: ಆರನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ಎರಡನೇ ಶನಿವಾರ ರಜೆಯ ಜತೆಗೆ ಹೆಚ್ಚುವರಿಯಾಗಿ ನಾಲ್ಕನೇ ಶನಿವಾರವೂ ರಜೆ ನೀಡುವಂತೆ ಶಿಫಾರಸು ಮಾಡಿದೆ.

ಸೋಮವಾರ ಸಲ್ಲಿಸಿದ ಅಂತಿಮ ವರದಿಯಲ್ಲಿ ಇದನ್ನು ಉಲ್ಲೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೌಕರರ ವೇತನ ಪರಿಷ್ಕರಣೆ ಹಾಗೂ ಆಡಳಿತ ಸುಧಾರಣೆ ಕುರಿತು ಶಿಫಾರಸು ಮಾಡಲು ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ದ್ದು,
ಆಯೋಗದ ಪದಾಧಿಕಾರಿಗಳು 500 ಪುಟಗಳ ಈ ವರದಿಯನ್ನು ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರಿಗೆ ಸಲ್ಲಿಸಿದರು. ಈಗಾಗಲೇ ವೇತನ ಪರಿಷ್ಕರಣೆ ಸಂಬಂಧಿಸಿದ ಮೊದಲ ವರದಿಯನ್ನು ಸರ್ಕಾರ ಅನುಷ್ಠಾನ ಮಾಡಿದೆ.

ಸರ್ಕಾರಕ್ಕೆ ಮಾಡಿದ ಶಿಫಾರಸ್ಸಿನಲ್ಲಿ ಏನೇನಿದೆ:
ಯಾವುದೇ ನಿರ್ಬಂಧ ಇಲ್ಲದಂತೆ ಎಲ್ಲ ನೌಕರರಿಗೂ ‘ಜ್ಯೋತಿ ಸಂಜೀವಿನಿ ಯೋಜನೆ’ಯಡಿ ಆರೋಗ್ಯ ವಿಮೆ ಕಲ್ಪಿಸಬೇಕು.
ಗರಿಷ್ಠ ಮೊತ್ತದ ಪಿಂಚಣಿ ಪಡೆಯಲು ಇದ್ದ ಅರ್ಹತಾ ಸೇವಾವಧಿಯನ್ನು 33 ವರ್ಷಗಳ ಬದಲಿಗೆ 30 ವರ್ಷಗಳಿಗೆ ಇಳಿಸಬೇಕು.
ಸಿ ಮತ್ತು ಬಿ ವರ್ಗದ ನೌಕರರಿಗೆ ವರ್ಷಕ್ಕೆ ಒಂದು ಬಾರಿ ಕಡ್ಡಾಯವಾಗಿ ತರಬೇತಿ ನೀಡಬೇಕು.

 

See also  ಬಿಡಿಎ ಎಂಜಿನಿಯರ್ ಮನೆಯಲ್ಲಿ ಹುಡುಕಿದಷ್ಟು ಸಿಗುತ್ತಿದೆ ಹಣ, ಚಿನ್ನ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು