ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರು ಮೂರೇ ದಿನದಲ್ಲಿ ತನ್ನ ರಾಜೀನಾಮೆ ನೀಡಿದ ಬಳಿಕ ಈಗ ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೆಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿನ್ನೆ ರಾಜ್ಯಪಾಲರನ್ನು ಭೇಟಿಯಾದ ಕುಮಾರಸ್ವಾಮಿ ಅವರು ಸರ್ಕಾರ ರಚನೆಗೆ ಅವಕಾಶ ಕೇಳಿದ್ದರು. ಸೋಮವಾರ ರಾಜೀವ್ ಗಾಂಧಿ ಪುಣ್ಯತಿಥಿ ಕಾರಣ ಸೋನಿಯಾ ಗಾಂಧಿ ಬರಲು ಸಾಧ್ಯವಾಗದೆ ಹಿನ್ನೆಲೆಯಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸುವರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿರುವರು. ಕಾರ್ಯಕ್ರಮಕ್ಕೆ ಹಲವಾರು ರಾಷ್ಟ್ರೀಯ ನಾಯಕರು ಆಗಮಿಸಲಿರುವರು.