News Kannada
Friday, September 30 2022

ಬೆಂಗಳೂರು ನಗರ

ನೂತನ ಸಚಿವರುಗಳಿಂದ ಪ್ರಮಾಣವಚನ ಸ್ವೀಕಾರ - 1 min read

Photo Credit :

ನೂತನ ಸಚಿವರುಗಳಿಂದ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಮೈತ್ರಿ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ 15 ಮತ್ತು ಜೆಡಿಎಸ್ ನ 10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬುಧವಾರ ರಾಜಭವನದಲ್ಲಿನ ಗಾಜಿನಮನೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ರಾಜ್ಯಪಾಲ ವಜುಬಾಯ್ ವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಮಾರಂಭದಲ್ಲಿ ಹಾಜರಿದ್ದರು.

ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪುರ, ಜಿ.ಟಿ.ದೇವೇಗೌಡ, ಮನಗೂಳಿ, ಗುಬ್ಬಿ ಶ್ರೀನಿವಾಸ್, ವೆಂಕಟರಾವ್ ನಾಡಗೌಡ, ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಎನ್. ಮಹೇಶ್, ಡಿ.ಸಿ. ತಮ್ಮಣ್ಣ ಜೆಡಿಎಸ್ ನಿಂದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರೆ, ಕಾಂಗ್ರೆಸ್ ನಿಂದ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಶಿವಶಂಕರ ರೆಡ್ಡಿ, ರಮೇಶ್ ಜಾರಕಿಹೊಳಿ, ಪ್ರಿಯಾಂಕಾ ಖರ್ಗೆ, ಯು.ಟಿ. ಖಾದರ್, ಜಮೀರ್ ಅಹ್ಮದ್, ಶಿವಾನಂದ ಪಾಟೀಲ್, ವೆಂಕಟರಮಣಪ್ಪ, ರಾಜಶೇಖರ್ ಪಾಟೀಲ್, ಪುಟ್ಟರಂಗಶೆಟ್ಟಿ, ಶಂಕರ್, ಜಯಮಾಲ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

See also  ಖಾಸಗಿ ಶಾಲೆಗಳಲ್ಲೂ ಕನ್ನಡ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುತ್ತೇವೆ :ಸಚಿವ ಬಿ.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು