ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರವು ಸುಮಾರು 20 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯರ ಪ್ರಧಾನ ಕಾರ್ಯದರ್ಶಿ ಎಲ್ ಕೆ ಅತೀಕ್ ಅವರನ್ನು ನಿಯೋಜಿಸಲಾಗಿದೆ.
ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಜಾವೇದ್ ಅಖ್ತರ್, ಬಿಬಿಎಂಪಿ ಹೆಚ್ಚುವರಿ ಆಯುಕ್ತರಾಗಿ ಡಿ. ರಂದೀಪ್, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಡಾ. ನಾಗಲಾಂಬಿಕಾ ದೇವಿ ಹೀಗೆ ಸುಮಾರು 20 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.