ಬೆಂಗಳೂರು: ಆಗಸ್ಟ್ ೨ರಂದು ಉತ್ತರ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಸಭೆ ನಡೆಸುವಂತೆ ಆಗ್ರಹಿಸಿ ವಿಧಾನಸಭೆಗೆ ಮುತ್ತಿಗೆ ಹಾಕುವುದಾಗಿ ಕನ್ನಡ ಒಕ್ಕೂಟ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಪ್ರತ್ಯೇಕ ರಾಜ್ಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುತ್ತಿರುವವನ್ನು ಖುದ್ದು ಭೇಟಿ ಮಾಡಿ ಹೋರಾಟ ಕೈಬಿಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಸಿಎಂ ಕುಮಾರಸ್ವಾಮಿ ಅವರುಈ ಸಂಬಂಧ ವಿಶೇಷ ಅಧಿವೇಶನ ನಡೆಸಿ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಅಗ್ರಹಿಸಿದರು.