ಬೆಂಗಳೂರು: ನಗರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ವಿವಿಧೆಡೆಗಳಲ್ಲಿ ಹಾಕಿರುವಂತಹ ಫ್ಲೆಕ್ಸ್ ತೆರವಿಗೆ ಹೈಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಇದಕ್ಕೆ ಸಹಕರಿಸುವಂತೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಹೈಕೋರ್ಟ್ ಆದೇಶದಂತೆ ನಗರದ ಸ್ವಚ್ಛತೆ ಹಾಗೂ ಪರಿಸರ ಮಾಲಿನ್ಯ ತಡೆಯಲು ಫ್ಲೆಕ್ಸ್ ತೆರವು ಅತೀ ಅಗತ್ಯ. ಇದಕ್ಕೆ ಎಲ್ಲಾ ಪಕ್ಷದ ಮುಖಂಡರು, ಕಾರ್ಯಕರ್ತರು ಸಹಕರಿಸುವಂತೆ ಅವರು ವಿನಂತಿಸಿಕೊಂಡಿದ್ದಾರೆ.
ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ಬಿಬಿಎಂಪಿ ಆಯಕ್ತರಿಗೆ ಸಿಎಂ ಆದೇಶಿಸಿದ್ದಾರೆ.